Pentagon: ‘ಪೆಂಟಗನ್’ ಏಪ್ರಿಲ್ 7ಕ್ಕೆ ತೆರೆಗೆ

ಕನ್ನಡದ ಪ್ರಯೋಗಾತ್ಮಕ ಸಿನಿಮಾ ‘ಪೆಂಟಗನ್’ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಐದು ನಿರ್ದೇಶಕರ ಐದು ಕತೆಯುಳ್ಳ ಸಿನಿಮಾ ಏಪ್ರಿಲ್ 7 ರಂದು ದೇಶಾದ್ಯಂತ ರಿಲೀಸ್ ಆಗಲಿದೆ ಎಂದು ನಿರ್ದೇಶಕ ಗುರು ದೇಶಪಾಂಡೆ ಮಾಹಿತಿ ಹಂಚಿಕೊಂಡಿದ್ದಾರೆ.

ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ನಿರ್ದೇಶನ ಮಾಡಿದ್ದಾರೆ. ಪೆಂಟಗನ್ ಸಿನಮಾಗೆ ಅಭಿಲಾಷ್ ಕಲಾತಿ ಮತ್ತು ಗುರುಪ್ರಸಾದ್ ಎಂಜಿ ಛಾಯಾಗ್ರಹಣ ಇದೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಪೆಂಟಗನ್ನಲ್ಲಿ ಕಿಶೋರ್, ಪೃಥ್ವಿ ಅಂಬಾರ್, ರವಿಶಂಕರ್ ಮತ್ತು ಪ್ರಕಾಶ್ ಬೆಳವಾಡಿ ಕೂಡ ನಟಿಸಿದ್ದಾರೆ. ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಚಿತ್ರತಂಡ ಹೊರಟಿದೆ.

ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದು ಗುರು ದೇಶಪಾಂಡೆ ಹೇಳಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!