ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಸಿಗರೇಟ್ ಎಳೆದು ಬಿಂದಾಸ್ ಫೋಟೋಶೂಟ್ ಮಾಡಿದ್ದು, ಈ ಫೋಟೋಶೂಟ್ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಎಳೆಯುವುದು ನಿಷೇಧವಾಗಿರುವುದರಿಂದ ಈ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕಾರಿನಿಂದ ಇಳಿಯುತ್ತಲೇ ಸಿಗರೇಟ್ ಹಿಡಿದು ವಿಲನ್ ಲುಕ್ಕಿನಲ್ಲಿ ನಡೆಸಿದ ಈ ಶೂಟ್ನ್ನು ರಜತ್ ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ಶೂಟ್ ಪೋಸ್ಟ್ ಮಾಡಿದ ಕೂಡಲೇ ನೆಟ್ಟಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಳೆದ ಬಾರಿ ವಿನಯ್ ಗೌಡ ಜೊತೆಗೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿ ಜೈಲಿಗೆ ಹೋಗಿ ಬೇಲ್ ಮೇಲೆ ಹೊರಬಂದ ರಜತ್, ಸಾರ್ವಜನಿಕರ ತೀಕ್ಷ್ಣ ಪ್ರತಿಕ್ರಿಯೆ ಎದುರಿಸುತ್ತಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ರಜತ್ ಸಿಗರೇಟ್ ಸೇದಿರುವ ಕಾರಣ ಮೈಸೂರು ಮಹಾನಗರ ಪಾಲಿಕೆ ಇವರ ಮೇಲೆ ಕ್ರಮ ವಹಿಸುತ್ತದೆಯೇ ಎಂದು ಕಾದು ನೋಡಬೇಕಿದೆ.
—–





Be the first to comment