ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಹಾರರ್ ಸಸ್ಪೆನ್ಸ್ ಥ್ರಿಲ್ಲರ್ “ಪಿನಾಕ” ಚಿತ್ರದ ಪೋಸ್ಟರ್ ಮಹಾ ಶಿವರಾತ್ರಿ ದಿನದಂದು ಬಿಡುಗಡೆಯಾಗಿದೆ.
“ಪಿನಾಕ” ಚಿತ್ರದ ವಿಭಿನ್ನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಮಹಾ ಶಿವರಾತ್ರಿ ಶುಭಾಶಯ ತಿಳಿಸಿದೆ. ಪೋಸ್ಟರ್ ನಲ್ಲಿ ತ್ರಿಶೂಲ ಹಿಡಿದು ನಿಂತಿರುವ ಗಣೇಶ್ ಅವರ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.
“ಪಿನಾಕ” ಎಂದರೆ ಶಿವನ ತ್ರಿಶೂಲ. ಗಣೇಶ್ ಅವರು ಈ ಚಿತ್ರದಲ್ಲಿ ಕ್ಷುದ್ರ ಹಾಗೂ ರುದ್ರ ಎಂಬ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ಟಿ.ಜಿ.ವಿಶ್ವ ಅವರು ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕರಾಗಿ ಜನಪ್ರಿಯರಾಗಿರುವ ಬಿ.ಧನಂಜಯ್ ಚೊಚ್ಚಲ ನಿರ್ದೇಶನದ ಚಿತ್ರ “ಪಿನಾಕ”. ‘ಪಿನಾಕ’ ಸಿನಿಮಾವು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಲಿದೆ. ಇದೊಂದು ಅಡ್ವೆಂಚರ್, ಥ್ರಿಲ್ಲರ್ ಹಾಗೂ ಕೌಟುಂಬಿಕ ಕಥಾಹಂದರವಿರುವ ಕಥೆಯನ್ನು ಹೊಂದಿರುವ ಸಿನಿಮಾ. ರಘು ನಿಡುವಳ್ಳಿ ಈ ಸಿನಿಮಾಗೆ ಸಂಭಾಷಣೆ ಬರೆಯುತ್ತಿದ್ದಾರೆ.

Be the first to comment