ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಪಿಂಕಿ ಎಲ್ಲಿ ಕನ್ನಡ ಚಿತ್ರ ಜೂನ್ 2 ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.
ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ ಮುಖ್ಯ ಭೂಮಿಕೆಯಲ್ಲಿಇದ್ದಾರೆ. ಗುಂಜಲಮ್ಮ, ಸಂಗಮ್ಮ ಮುಂತಾದವರು ಅಭಿನಯಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ಚಿತ್ರ ಪ್ರದರ್ಶನ ಕಂಡಿದೆ.
ನಟಿ ಅಕ್ಷತಾ ಪಾಂಡವಪುರ ಅವರು, ನಿರ್ದೇಶಕರು ಕಥೆ ಹೇಳುವ ರೀತಿಯೇ ವಿಭಿನ್ನ. ಈ ಚಿತ್ರದಲ್ಲಿ ಮಗುವನ್ನು ಕಳೆದುಕೊಂಡಿರುವ ತಾಯಿಯ ಪಾತ್ರ ನನ್ನದು. ಈಗಾಗಲೇ ಪಿಂಕಿ ಸಿನಿಮಾ ಪ್ರಪಂಚದಾದ್ಯಂತ ಪ್ರತಿಷ್ಠಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚುಗೆಗೆ ಪಾತ್ರವಾಗಿದೆ ಎಂದಿದ್ದಾರೆ.
ನಿರ್ದೇಶಕ ಪೃಥ್ವಿ ಕೋಣನೂರು ಅವರು, ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಕಥೆ ಇದಾಗಿದೆ. ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಇದು. ಮಗುವೊಂದು ಕಾಣೆಯಾಗಿರುತ್ತದೆ. ಆದರೆ ಈ ಕಥೆ ಮಗುವಿನ ಸುತ್ತ ಇರುವುದಿಲ್ಲ. ಮಗುವನ್ನು ಕಳೆದುಕೊಂಡವರ ಸುತ್ತ ಇರುತ್ತದೆ. ಕಥೆಯ ಒಂದೆಳೆ ಕೇಳಿ ಮೆಚ್ಚಿಕೊಂಡ ನಿರ್ಮಾಪಕ ಕೃಷ್ಣೇಗೌಡ ಅವರು ನಿರ್ಮಾಣಕ್ಕೆ ಮುಂದಾದರು. ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ, ಪೃಥ್ವಿ, ಜೊತೆಗೆ ಗುಂಜಲಮ್ಮ ಹಾಗೂ ಸಂಗಮ್ಮ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ಲಂ ನಿವಾಸಿಗಳು. ನಟನೆ ಗೊತ್ತಿಲ್ಲದ ಇವರು ಸಹಜವಾಗಿ ಅಭಿನಯಿಸಿರುವುದು ಈ ಚಿತ್ರದ ವಿಶೇಷ ಎಂದಿದ್ದಾರೆ.
ನಿರ್ಮಾಪಕ ಕೃಷ್ಣೇಗೌಡ ಅವರು, ನಿರ್ದೇಶಕರು ಮಗು ಕಳೆದು ಹೋಗಿರುವ ಕಥೆ ಎಂದು ಕಥೆಯ ಒಂದೆಳೆ ಹೇಳಿದರು. ನಾನು ಆಗಲೇ ಕೆಲಸ ಶುರು ಮಾಡಿಕೊಳ್ಳಿ ಎಂದು ಹೇಳಿದೆ. ಬೆಂಗಳೂರಿನಲ್ಲಿ ಮಗುವಿನ ಭವಿಷ್ಯಕ್ಕಾಗಿ ತಂದೆ – ತಾಯಿ ಕೆಲಸಕ್ಕಾಗಿ ಮಗುವನ್ನು ನೋಡಿಕೊಳ್ಳಲು ಬಿಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಇಲ್ಲಿ ಆ ಮಗುವೆ ಇನ್ನೊಬ್ಬರ ಭವಿಷ್ಯಕ್ಕೆ ದಾರಿಯಾಗುತ್ತದೆ. ಇಂಥ ಅಪರೂಪದ ಕಥೆ ಈ ಚಿತ್ರದಲ್ಲಿದೆ ಎಂದು ಹೇಳಿದ್ದಾರೆ.
—-
Be the first to comment