ಕನ್ನಡದ ಹೆಸರಾಂತ ನಟಿ ಪೂಜಾ ಗಾಂಧಿ ಬಹುಕಾಲದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಉದ್ಯಮಿ ವಿಜಯ್ ಘೋರ್ಪಡೆ ಜೊತೆ ಪೂಜಾ ಗಾಂಧಿ ಬುಧವಾರ ಮಂತ್ರ ಮಾಂಗಲ್ಯ ಪದ್ಧತಿಯಂತೆ ಸರಳವಾಗಿ ಮದುವೆಯಾದರು.
ಮದುವೆ ವೇಳೆ ಕುಟುಂಬಸ್ಥರು, ಆಪ್ತರು ಸ್ಯಾಂಡಲ್ವುಡ್‌ನ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ಮುಂಗಾರು ಮಳೆ ನಿರ್ದೇಶಕ ಯೋಗರಾಜ್ ಭಟ್, ಸುಧಾರಾಣಿ, ಶುಭಾ ಪೂಂಜಾ, ಸುಮನಾ ಕಿತ್ತೂರು ಸೇರಿದಂತೆ ಅನೇಕರು ಭಾಗಿಯಾಗಿ ಶುಭ ಹಾರೈಸಿದರು.
ಕಳೆದ 10 ವರ್ಷಗಳಿಂದ ವಿಜಯ್ ಮತ್ತು ಪೂಜಾ ಗಾಂಧಿ ಸ್ನೇಹಿತರಾಗಿದ್ದರು. ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರಾದ ವಿಜಯ್ ಅವರಿಂದಲೇ ಪೂಜಾ ಗಾಂಧಿ ಕನ್ನಡ ಕಲಿತಿದ್ದರು.
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಮುಂಗಾರು ಮಳೆ ಚಿತ್ರದ ಮೂಲಕ ಪೂಜಾ ಗಾಂಧಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರ ಸೂಪರ್ ಹಿಟ್ ಆಗುವ ಮೂಲಕ ಪೂಜಾ ಗಾಂಧಿ ಪ್ರಖ್ಯಾತಿ ಪಡೆದರು.
ಯಶಸ್ಸಿನ ಹಾದಿಯಲ್ಲಿ ಮುಂದೆ ಸಾಗಿದ ಪೂಜಾ ಗಾಂಧಿ ಮುಂದೆ ಚಿತ್ರಗಳ ಆಯ್ಕೆಯಲ್ಲಿ ಎಡವುವ ಮೂಲಕ ವೃತ್ತಿ ಬದುಕಿನಲ್ಲಿ ಹಿನ್ನಡೆ ಅನುಭವಿಸಿದರು.
——–
Be the first to comment