ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಇಂದು ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ಪುನೀತ್ ರಾಜ್‌ಕುಮಾರ್ ಅವರು ಸರ್ಕಾರದ ಹಲವು ಕಾರ್ಯಕ್ರಮಗಳಿಗೆ ರಾಯಭಾರಿಯಾಗಿದ್ದರು. ಕೆಎಂಎಫ್‌ಗೂ ಉಚಿತವಾಗಿ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಅದನ್ನು ಗಮನದಲ್ಲಿಟ್ಟುಕೊಂಡು ಸಹಕಾರ ಇಲಾಖೆಯಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಸಹಕಾರ ಸಚಿವ ಸೋಮಶೇಖರ್, ಸಹಕಾರ ಮಹಾ ಮಂಡಳಿ ಅಧ್ಯಕ್ಷ ಜಿಟಿ ದೇವೇಗೌಡ ಹಾಗೂ ಇನ್ನಿತರ ಅಧಿಕಾರಿಗಳು ಈ ಬಗ್ಗೆ ಚರ್ಚಿಸಿ ಪ್ರಶಸ್ತಿ ಪ್ರದಾನ ಮಾಡುವ ನಿರ್ಣಯ ಕೈಗೊಂಡಿದ್ದರು.

ನಿನ್ನೆ ಮೈಸೂರು ವಿಶ್ವವಿದ್ಯಾನಿಲಯ ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಿತು. ಅಶ್ವಿನಿ ಅವರು ಪ್ರಶಸ್ತಿ ಸ್ವೀಕರಿಸಿದರು. ಡಾ.ರಾಜ್‌ಕುಮಾರ್ ಅವರಿಗೂ ಮೈಸೂರು ವಿಶ್ವವಿದ್ಯಾನಿಲಯ ಈ ಹಿಂದೆ ಗೌರವ ಡಾಕ್ಟರೇಟ್ ನೀಡಿತ್ತು.ಮಾರ್ಚ್ 17ರಂದು ಪುನೀತ್ ಅಭಿನಯದ ಜೇಮ್ಸ್ ಚಿತ್ರ ತೆರೆ ಕಂಡಿದೆ. ಈ ಚಿತ್ರ ವಿಶ್ವದ ಹಲವೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

—————-

Be the first to comment

Leave a Reply

Your email address will not be published. Required fields are marked *

Translate »
error: Content is protected !!