Skip to content
ದಿಗಂತ್ ಅಭಿನಯದ ‘ಪೌಡರ್’ ಚಿತ್ರದ ಟ್ರೈಲರ್ ಇದೇ ಆಗಸ್ಟ್ 7ರಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ.
ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರೋಮ್ಯಾಂಟಿಕ್ ಕಾಮಿಡಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ದಿಗಂತ್, ಧನ್ಯ ರಾಮ್ ಕುಮಾರ್, ಶರ್ಮಿಳಾ ಮಾಂಡ್ರೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ರಂಗಾಯಣ ರಘು, ಅನಿರುದ್ಧ ಆಚಾರ್ಯ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ಹುಲಿ ಕಾರ್ತಿಕ್ ಪಾತ್ರ ವರ್ಗದಲ್ಲಿದ್ದಾರೆ.
ಕೆ ಆರ್ ಜಿ ಸ್ಟೂಡಿಯೋಸ್ ಬ್ಯಾನರ್ ನಡಿ ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಮಣ್ಯಂ ಬಂಡವಾಳ ಹೂಡಿದ್ದಾರೆ. ವಾಸುಕಿ ವೈಭವ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಕೃಷ್ಣ ಮತ್ತು ಗೌತಮ್ ಪಲ್ಲಕ್ಕಿ ಅವರ ಸಂಕಲನ, ತ್ರಿಲೋಕ್ ತ್ರಿವಿಕ್ರಮ್ ಅವರ ಸಂಭಾಷಣೆ, ಹಾಗೂ ಅರ್ಜನ್ ರಾಜ್ ಸಾಹಸ ನಿರ್ದೇಶನವಿದೆ.
‘ಪೌಡರ್’ ಚಿತ್ರ ಆಗಸ್ಟ್ 23 ರಂದು ತೆರೆ ಮೇಲೆ ಬರಲು ಸಜ್ಜಾಗಿದೆ.
—–
Post Views:
111
Translate »
error: Content is protected !!
Be the first to comment