ದಿಗಂತ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಪೌಡರ್’ ಸಿನಿಮಾ ಜುಲೈ 12ರಂದು ತೆರೆಕಾಣಲಿದೆ.
ಜನಾರ್ದನ್ ಚಿಕ್ಕಣ್ಣ ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಕಳೆದ ಸೆಪ್ಟೆಂಬರ್ನಲ್ಲಿ ಆರಂಭವಾಗಿತ್ತು. ‘ಪೌಡರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
ಇಬ್ಬರು ಯುವಕರು ಒಂದು ನಿಗೂಢವಾದ ‘ಪೌಡರ್’ ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳೇ ಈ ಸಿನಿಮಾದ ಕಥೆ.
ಕಾಮಿಡಿ ಜಾನರ್ನ ಈ ಸಿನಿಮಾದಲ್ಲಿ ದಿಗಂತ್ ನಾಯಕನಾಗಿ ನಟಿಸಿದ್ದು, ಶರ್ಮಿಳಾ ಮಾಂಡ್ರೆ, ಧನ್ಯಾ ರಾಮ್ಕುಮಾರ್ ಜೋಡಿಯಾಗಿದ್ದಾರೆ. ರಂಗಾಯಣ ರಘು, ನಾಗಭೂಷಣ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಕೆ.ಆರ್.ಜಿ ಮತ್ತು ಟಿ.ವಿ.ಎಫ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ.
—–

Be the first to comment