ಸಲ್ಮಾನ್ ಎದುರು ಸ್ಪಿರಿಟ್ ಬಿಡುಗಡೆ

ಸಲ್ಮಾನ್‌ ಖಾನ್‌ ನಟನೆಯ ಬಹುಬಜೆಟ್ ಸಿನಿಮಾದ ಎದುರು ಟಾಲಿವುಡ್ ಸ್ಟಾರ್ ಪ್ರಭಾಸ್ ಹಾಗೂ ‘ಅನಿಮಲ್’ ಖ್ಯಾತಿಯ ಸಂದೀಪ್‌ ರೆಡ್ಡಿ ವಂಗಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಸ್ಪಿರಿಟ್ ಸಿನಿಮಾ 2027ರ ಮಾರ್ಚ್ 5ರಂದು ಬಿಡುಗಡೆಯಾಗಲಿದೆ.

ಚಿತ್ರತಂಡ ಬಿಡುಗಡೆ ಘೋಷಣೆಯನ್ನು ಅಧಿಕೃತವಾಗಿ ಮಾಡಿದೆ. ಚಿತ್ರದ ಶೂಟಿಂಗ್ ಬರದಿಂದ ಸಾಗುತ್ತಿದೆ. ಪ್ರಭಾಸ್‌ ಅವರಿಗೆ ದಕ್ಷಿಣ ಭಾರತದಲ್ಲಿ ಅಪಾರ ಅಭಿಮಾನಿ ಬಳಗವಿದ್ದು, ಹಿಂದಿ ಸಿನಿಮಾಗಳ ಸ್ಪರ್ಧೆಯನ್ನು ಅವರು ಭಯಪಡುವ ಅಗತ್ಯವಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಚಿತ್ರದ ಬಿಡುಗಡೆ ಇದ್ದರೂ ‘ಸ್ಪಿರಿಟ್’ ತನ್ನ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎನ್ನಲಾಗಿದೆ.

ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಪೂರ್ವನಿಗದಿಯಂತೆ ನಡೆಯುತ್ತಿದೆ. ಅಭಿಮಾನಿಗಳಲ್ಲಿ ಚಿತ್ರದ ನಿರೀಕ್ಷೆ ಹೆಚ್ಚಾಗಿದೆ. ಈ ಚಿತ್ರದಲ್ಲಿ ಪ್ರಭಾಸ್‌ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಸಿನಿಪ್ರೇಮಿಗಳ ಕುತೂಹಲ ಮೂಡಿಸಿದೆ.

ಈ ಚಿತ್ರದಲ್ಲಿ ಬಾಲಿವುಡ್ ನಟಿ ತೃಪ್ತಿ ದಿಮ್ರಿ ನಾಯಕಿಯಾಗಿ ನಟಿಸುತ್ತಿದ್ದು, ಮೊದಲ ಬಾರಿಗೆ ಪ್ರಭಾಸ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ವಿವೇಕ್‌ ಒಬೆರಾಯ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಲ್ಮಾನ್‌ ಖಾನ್‌ ನಟನೆಯ ಬಹುಬಜೆಟ್ ಸಿನಿಮಾ ಇದೇ ಅವಧಿಯಲ್ಲಿ ಬಿಡುಗಡೆಯಾಗುತ್ತಿರುವ ಹಿನ್ನೆಲೆ ‘ಸ್ಪಿರಿಟ್’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಬಹುದು ಎಂಬ ವದಂತಿಗಳು ಹರಿದಾಡಿದ್ದವು. ಆದರೆ ರಿಲೀಸ್ ಡೇಟ್ ಬದಲಾವಣೆ ಇಲ್ಲ ಎಂದು ಚಿತ್ರತಂಡ ಸ್ಪಷ್ಟನೆ ನೀಡಿ ಗಾಳಿ ಸುದ್ದಿಗಳಿಗೆ ತೆರೆ ಹಾಕಿದೆ.

ಸಲ್ಮಾನ್‌ ಖಾನ್ ಅಭಿನಯದ ಹೊಸ ಚಿತ್ರಕ್ಕೆ ತಾತ್ಕಾಲಿಕವಾಗಿ ‘SVC 63’ ಎಂದು ಹೆಸರಿಡಲಾಗಿದೆ. 2027ರ ಈದ್ ಪ್ರಯುಕ್ತ ಸಿನಿಮಾ ಬಿಡುಗಡೆಯಾಗಲಿದೆ. ಚಿತ್ರಕ್ಕೆ ವಂಶಿ ಪಡಿವಾಲಿ ನಿರ್ದೇಶನ ಮಾಡುತ್ತಿದ್ದಾರೆ

Be the first to comment

Leave a Reply

Your email address will not be published. Required fields are marked *

Translate »
error: Content is protected !!