ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ‘ಪ್ರಭುತ್ವ’ ನವೆಂಬರ್ 22ರಂದು ಬಿಡುಗಡೆಯಾಗುತ್ತಿದೆ.
ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಈ ಚಿತ್ರವನ್ನು ರವಿರಾಜ್ ಎಸ್ ಕುಮಾರ್ ನಿರ್ಮಿಸಿದ್ದಾರೆ. ಮೇಘಡಹಳ್ಳಿ ಶಿವಕುಮಾರ್ ಕಥೆ ಬರೆದಿದ್ದಾರೆ.
‘ಪ್ರತಿಯೊಬ್ಬ ಮತದಾರರು ಈ ಚಿತ್ರವನ್ನು ನೋಡಬೇಕು. ಮತವನ್ನು ಮಾರಾಟ ಮಾಡಿಕೊಳ್ಳಬಾರದು. ಈ ರೀತಿ ಮತದಾನದ ಮಹತ್ವದ ಬಗ್ಗೆ ತಿಳಿಸುವ ಚಿತ್ರವಿದು. ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ನನ್ನ ಮಗ ರವಿರಾಜ್ ಎಸ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ನವೆಂಬರ್ 22 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ದೀಪಕ್ ಗಂಗಾಧರ್ ಅವರು ವಿತರಣೆ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ಮೇಘಡಹಳ್ಳಿ ಡಾ.ಶಿವಕುಮಾರ್.
ನಿರ್ಮಾಪಕ ರವಿರಾಜ್ ಎಸ್ ಕುಮಾರ್, ‘ಪ್ರಭುತ್ವ’ ಚೆನ್ನಾಗಿ ಮೂಡಿಬಂದಿದೆ. ಎಲ್ಲರೂ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡಿ ಎಂದು ತಿಳಿಸಿದರು.
ನಾಯಕ ಚೇತನ್ ಚಂದ್ರ, ಇದು ನನ್ನ 12ನೇ ಸಿನಿಮಾ. ಬಹಳ ದಿನಗಳ ನಂತರ ನಿಮ್ಮ ಮುಂದೆ ಬರುತ್ತಿದ್ದೇನೆ. ಮೇಘಡಹಳ್ಳಿ ಡಾ.ಶಿವಕುಮಾರ್ ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಒಳ್ಳೆಯ ಕಥೆ ಬರೆದಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಹಾಗೂ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.
‘ಪ್ರಭುತ್ವ’ಚಿತ್ರದಲ್ಲಿ ಪಾವನ ನಾಯಕಿಯಾಗಿ ನಟಿಸಿದ್ದಾರೆ. ನಾಸರ್,ಶರತ್ ಲೋಹಿತಾಶ್ವ,ಅಂಬಿಕಾ, ರೂಪಾದೇವಿ, ರಾಜೇಶ್ ನಟರಂಗ,ಅವಿನಾಶ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಎಮಿಲ್ ಸಂಗೀತ ನೀಡಿದ್ದಾರೆ.
Be the first to comment