Prajarajya: ಮಾ.3ಕ್ಕೆ “ಪ್ರಜಾರಾಜ್ಯ”

ಪ್ರಜಾಪ್ರಭುತ್ವದ ಮಹತ್ವ ಸಾರುವ “ಪ್ರಜಾರಾಜ್ಯ” ಚಿತ್ರ ಮಾರ್ಚ್ 3 ರಂದು ಬಿಡುಗಡೆಯಾಗಲಿದೆ.

ನಿರ್ಮಾಪಕ‌ ಡಾ.ವರದರಾಜು ಡಿ.ಎನ್ ಅವರು ಸದ್ಯದಲ್ಲೇ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮಹತ್ವ ಸಾರುವ ನಮ್ಮ “ಪ್ರಜಾ ರಾಜ್ಯ” ಚಿತ್ರ ಮಾರ್ಚ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟ್ರೇಲರ್ ಗೆ ದೊರಕಿರುವ ಪ್ರತಿಕ್ರಿಯೆಗೆ ಮನತುಂಬಿ ಬಂದಿದೆ ಎಂದಿದ್ದಾರೆ.

ವಿಜಯ್ ಭಾರ್ಗವ್ ನಿರ್ದೇಶನದ ಈ ಚಿತ್ರದ ತಾರಾಬಳಗದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್, ನಾಗಾಭರಣ, ಡಾ.ವರದರಾಜು, ಅಚ್ಯತಕುಮಾರ್, ವಿಜಯ್ ಭಾರ್ಗವ, ಸುಧಾ ಬೆಳವಾಡಿ, ದಿವ್ಯ ಗೌಡ, ಸುಧಾರಾಣಿ, ಸಂಪತ್ ಮೈತ್ರೇಯ, ಚಿಕ್ಕಹೆಜ್ಜಾಜಿ ಮಹದೇವ್ ಮುಂತಾದವರಿದ್ದಾರೆ.

ಈಗಾಗಲೇ ಈ ಚಿತ್ರ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ. ಉತ್ತಮ ಸಂದೇಶವಿರುವ ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎಂದು ಚಿತ್ರತಂಡ ಭರವಸೆ ಹೊಂದಿದೆ.

ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!