Abbara Movie : ನ.18ಕ್ಕೆ’ಅಬ್ಬರ’ಅದ್ದೂರಿಯಾಗಿ ತೆರೆಗೆ ; ಮೂವರು ನಾಯಕಿಯರ ಜೊತೆ ಪ್ರಜ್ವಲ್ ಡ್ಯುಯೆಟ್‌!

ಪ್ರಜ್ವಲ್ ದೇವರಾಜ್‌, ರಾಜಶ್ರೀ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾ ಚಂದ್ರ ನಟಿಸಿರುವ ‘ಅಬ್ಬರ’ ಸಿನಿಮಾ ಇದೇ ನವೆಂಬರ್ 18ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ.

ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ‘ಅಬ್ಬರ’ ಸಿನಿಮಾವು ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೂ ಮುನ್ನ ನಡೆದ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದ ಚಿತ್ರತಂಡ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು. ಟೈಸನ್, ಕ್ರ‍್ಯಾಕ್ ನಂತರ ಕೆ. ರಾಮ್‌ನಾರಾಯಣ್ ನಿರ್ದೇಶಿಸಿರುವ ಚಿತ್ರ ಇದಾಗಿದ್ದು, ಸಿ & ಎಂ ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಅವರು ನಿರ್ಮಿಸಿದ್ದಾರೆ. ಆ್ಯಕ್ಷನ್, ಫ್ಯಾಮಿಲಿ ಬಾಂಡಿಂಗ್, ಕಾಮಿಡಿ ಎಂಟರ್‌ಟೈನರ್ ಕಥಾಹಂದರ ಹೊಂದಿರೋ ಈ ಚಿತ್ರದಲ್ಲಿ ತಂದೆ ಮಗನ ನಡುವಿನಭಾವನಾತ್ಮಕ ಸಂಬಂಧ ಹಾಗೂ ಅದರ ಮಹತ್ವದ ಕುರಿತಂತೆ ಹೇಳಲಾಗಿದೆಯಂತೆ. ತಂದೆ ಒಂದು ಒಂದು ತಪ್ಪು ಮಾಡ್ತಾನೆ, ಅದನ್ನು ಸರಿಪಡಿಸುವುಕ್ಕೆ ಹೋಗಿ ಮತ್ತೊಂದು ತಪ್ಪು ಮಾಡ್ತಾನೆ. ನಂತರ ಮಗ ಅದನ್ನು ಹೇಗೆ ಸರಿಪಡಿಸ್ತಾನೆ ಅನ್ನೋದೇ ಈ ಚಿತ್ರದ ಎಳೆಯಂತೆ. ಪ್ರಜ್ವಲ್‌ಗೆ ನಾಯಕಿಯರಾಗಿ ರಾಜಶ್ರೀ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾ ಚಂದ್ರ ಅಭಿನಯಿಸಿದ್ದಾರೆ. ಶೋಭರಾಜ್, ರವಿಶಂಕರ್, ಶಂಕರ್ ಅಶ್ವಥ್, ವಿಕ್ಟರಿವಾಸು, ಕೋಟೆ ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!