Komal ‘ಕಾಲಾಯಾ ನಮಃ’ಕ್ಕೆ ಎಂಟ್ರಿ ಕೊಟ್ಟ ಪ್ರಕಾಶ್ ರೈ

ಕೋಮಲ್ ನಟನೆಯ ‘ಕಾಲಾಯಾ ನಮಃ’ ಚಿತ್ರದ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ.

ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಎಂಟ್ರಿ ಕೊಟ್ಟಿದ್ದಾರೆ.ಪ್ರಕಾಶ್ ರೈ ಅಭಿನಯದ ಸನ್ನಿವೇಶಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ.

ಕೋಮಲ್ ಹಲವು ವರ್ಷಗಳ ನಂತರ ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಖುಷಿ ನೀಡಿದೆ.

ಅನುಸೂಯ ಕೋಮಲ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮತಿವಣನ್ ನಿರ್ದೇಶಿಸುತ್ತಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಕೋಮಲ್ ಜೊತೆಗೆ ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್, ಜಗ್ಗೇಶ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!