ಅಂತ್ಯಕ್ರಿಯೆಯ ಟೀಕೆಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಇತ್ತೀಚಿಗೆ ನಿಧನರಾದ ತನ್ನತಾಯಿ ಸುವರ್ಣಲತಾ ಅವರ ಅಂತಿಮ ವಿಧಿ ವಿಧಾನಗಳನ್ನು ಕ್ರಿಶ್ಚಿಯನ್ ಧರ್ಮದ ಪ್ರಕಾರ ನೆರೆವೇರಿಸಿದ ನಟ ಪ್ರಕಾಶ್ ರಾಜ್ ತಮ್ಮ ವಿರುದ್ಧದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.

2025 ರ ಸಂದರ್ಶನದ ಕ್ಲಿಪ್‌ಗಳನ್ನು ತಾಯಿಯ ಅಂತ್ಯಕ್ರಿಯೆಯೊಂದಿಗೆ ಜೋಡಿಸುವ ಮೂಲಕ ನೆಟ್ಟಿಗರು ಪ್ರಕಾಶ್ ರಾಜ್ ವಿರುದ್ಧ ಕಿಡಿಕಾರುತ್ತಿದ್ದಾರೆ.  ಸಂದರ್ಶನದಲ್ಲಿ ನಾನು ನಾಸ್ತಿಕ ಎಂದು ಪ್ರಕಾಶ್ ರಾಜ್ ಹೇಳಿಕೊಂಡಿದ್ದರು. ಈ  ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್ ನನ್ನ ವೈಯಕ್ತಿಕ ನಂಬಿಕೆಗಳು ತನ್ನ ತಾಯಿಯ ಇಚ್ಚೆಗೆ ತೊಡಕಾಗುವುದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

‘ಹೌದು. ನಾನು ದೇವರನ್ನು ನಂಬುವುದಿಲ್ಲ. ಆದರೆ ನನ್ನ ತಾಯಿ ತನ್ನ ದೇವರನ್ನು ನಂಬಿದ್ದಳು. ಆಕೆಯ ನಂಬಿಕೆಯ ಪ್ರಕಾರ ಅಂತ್ಯಸಂಸ್ಕಾರ ಮಾಡುವ ಹಕ್ಕನ್ನು ನಿರಾಕರಿಸಲು ನಾನು ಯಾರು? ಇದು ನಾವು ಒಬ್ಬರಿಗೊಬ್ಬರು ನೀಡುವ ಮೂಲಭೂತ ಗೌರವ” ಎಂದು ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ಪ್ರಕಾಶ್ ರಾಜ್ ಹೇಳಿಕೆಗೆ ಅವರ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

ವಯೋಸಹಜ ಸಮಸ್ಯೆಗಳಿಂದ 86 ನೇ ವಯಸ್ಸಿನಲ್ಲಿ ನಿಧನರಾದ ಪ್ರಕಾಶ್ ರಾಜ್ ತಾಯಿ ಸುವರ್ಣಲತಾ ಅವರ ಅಂತಿಮ ವಿಧಿ ವಿಧಾನಗಳನ್ನು ಅವರ ನಂಬಿಕೆಯಂತೆ ಮಾರ್ಚ್ 31 ರಂದು ಕ್ರಿಶ್ಚಿಯನ್ ಧರ್ಮದ ಪ್ರಕಾರ ಬೆಂಗಳೂರಿನಲ್ಲಿ ನೆರವೇರಿಸಲಾಗಿತ್ತು.  ಕ್ರಿಶ್ಚಿಯನ್ ಧರ್ಮದ ಪ್ರಕಾರ ತಾಯಿಯ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ ನಂತರ ಪ್ರಕಾಶ್ ರಾಜ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!