ಪ್ಯಾಲೆಸ್ತೀನಿ ಸಿನೆಮಾ ನಿರ್ಬಂಧಕ್ಕೆ ಪ್ರಕಾಶ್‌ ರಾಜ್‌ ವಿರೋಧ

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ಟೀನ್‌ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ  ಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರಾಜ್‌ ವಿರೋಧ ವ್ಯಕ್ತಪಡಿಸಿದ್ದಾರೆ.

‘ಇತ್ತೀಚೆಗೆ ಸಿನಿಮಾ ಮತ್ತು ಸಾಹಿತ್ಯ ಕಾರ್ಯಕ್ರಮಗಳಲ್ಲಿಯೂ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದೆ. ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ಟೀನ್‌ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡದಿರುವುದು ಒಪ್ಪಲಾಗದು. ಇದರ ವಿರುದ್ಧ ಗಟ್ಟಿಯಾದ ನಿಲುವನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಬೇಕು’ ಎಂದು ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಒತ್ತಾಯಿಸಿದರು.

‘ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಬೇಕು. ಇತರರು ತಮ್ಮ ಕಥೆಗಳನ್ನು ನಮ್ಮ ನೆಲಕ್ಕೆ ತರುವುದನ್ನು ತಡೆಯುವುದು ಹೇಗೆ ಸಮ್ಮತ? ಕೇರಳ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ನಿಲುವು ತಾಳಿ ಚಿತ್ರಗಳನ್ನು ಪ್ರದರ್ಶಿಸಿದೆ. ಕರ್ನಾಟಕವೂ ಅದೇ ಧೈರ್ಯ ತೋರಬೇಕು’ ಎಂದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ದೇಶ ಬೇರೆ ದೇಶಗಳ ಜನರ ಬದುಕು, ರಾಜಕೀಯ ವ್ಯವಸ್ಥೆ ಮತ್ತು ಸಮಾಜವನ್ನು ಅರ್ಥ ಮಾಡಿಕೊಳ್ಳುವುದಾಗಿದೆ’ ಎಂದರು. ಆದರೆ ಪ್ರಕಾಶ್ ರಾಜ್ ಅವರ ಪ್ಯಾಲೆಸ್ಟೀನ್‌ ಚಿತ್ರಗಳ ನಿರ್ಬಂಧ ಬಗ್ಗೆ  ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಚಲನಚಿತ್ರೋತ್ಸವ ಫೆಬ್ರವರಿ 6ರವರೆಗೂ ನಡೆಯಲಿದೆ. ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್‍ನ ಸಿನಿಪೊಲಿಸ್‍ ಮಲ್ಟಿಪ್ಲೆಕ್ಸ್, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ ಮತ್ತು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!