ದಕ್ಷಿಣ ಭಾರತದ ಪ್ರಖ್ಯಾತ ನಟ ಪ್ರಕಾಶ್ ರಾಜ್ ಅವರು ರಾಮಾಯಣ ಕುರಿತು ನೀಡಿರುವ ಹೇಳಿಕೆ ಸಂಬಂಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಕಾಶ್ ರಾಜ್ ರಾಮಾಯಣದ ಕಥೆ ಹೇಳಿದ್ದಾರೆ.
ರಾಮ ಉತ್ತರ ಭಾರತದವ. ರಾವಣ ದಕ್ಷಿಣ ಭಾರತದ ಆದಿವಾಸಿ. ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಆಗ ಲಕ್ಷ್ಮಣನಿಗೆ ಹಸಿವಾಗಿರುತ್ತದೆ. ಅಲ್ಲಿ ಹಣ್ಣಿನ ತೋಟ ಇರುತ್ತದೆ. ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ.
ಅಲ್ಲಿಗೆ ಬರುವ ಶೂರ್ಪನಖಿ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ ಎನ್ನುತ್ತಾಳೆ. ಆಗ ರಾವಣ, ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾನೆ.
ಬಳಿಕ ರಾವಣ ಹಣ ಕೇಳುತ್ತಾನೆ. ರಾಮ ಇಲ್ಲ ಎನ್ನುತ್ತಾನೆ. 20 ಪರ್ಸೆಂಟ್ ಡಿಸ್ಕೌಂಟ್ ಕೊಡ್ತೀನಿ ಎಂದು ರಾವಣ ಹೇಳುತ್ತಾನೆ. ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ? ಅದೇ ರೀತಿ ಹಿಂದಿ ಹೇರಿಕೆ ಮಾಡಬೇಡಿ. ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್ ಫೆಸ್ಟ್ ಮಾಡುತ್ತೇವೆ ಎಂದಿದ್ದಾರೆ ಪ್ರಕಾಶ್ ರಾಜ್.
ಈ ಹೇಳಿಕೆಗಳು ಧಾರ್ಮಿಕ ಭಾವನೆಗೆ ಧಕ್ಕೆ ತಂದಿವೆ ಎಂಬ ಆರೋಪದಡಿ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಅಭಿವ್ಯಕ್ತಿಯ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸಂವೇದನೆಗಳ ನಡುವಿನ ಗಡಿ ಕುರಿತು ಚರ್ಚೆಗೂ ನಾಂದಿ ಹಾಡಿದೆ.





Be the first to comment