ಪ್ರದೋಷ್‌ಗೆ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಎಸ್. ರಾವ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು  ಕೋರ್ಟ್ ಅನುಮತಿ ನೀಡಿದೆ.

ಮಾಫಿ ಸಾಕ್ಷಿಯಾಗಲು ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು 59ನೇ ಸಿಸಿಹೆಚ್ ನ್ಯಾಯಾಲಯ ಅಂಗೀಕರಿಸಿದ್ದು,  ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಆದೇಶ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಪ್ರದೋಷ್ ನೀಡಲಿರುವ ಹೇಳಿಕೆಗಳು ವಿಚಾರಣೆಯ ಮುಂದಿನ ಹಂತದಲ್ಲಿ ಮಹತ್ವದ ತಿರುವು ನೀಡುವ ಸಾಧ್ಯತೆಯಿದೆ.

ಮಾಫಿ ಸಾಕ್ಷಿಯಾಗಲು ಒಪ್ಪಿರುವ ಪ್ರದೋಷ್‌ಗೆ ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ. ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಅವರು ಜೈಲಿನಲ್ಲೇ ಇರಬೇಕು. ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದರೆ ಸುಳ್ಳು ಸಾಕ್ಷಿ ನೀಡಿದ ಪ್ರಕರಣ ದಾಖಲಿಸುವುದರ ಜೊತೆಗೆ ಮಾಫಿ ಸಾಕ್ಷಿಯ ಸ್ಥಾನವನ್ನು ರದ್ದುಪಡಿಸಿ ಮತ್ತೆ ಆರೋಪಿಯನ್ನಾಗಿ ಪರಿಗಣಿಸುವ ಎಚ್ಚರಿಕೆ ನೀಡಲಾಗಿದೆ.

ಪ್ರದೋಷ್ ತಮ್ಮ ಗಮನಕ್ಕೆ ಬಂದಿರುವ ಎಲ್ಲ ಸತ್ಯಾಂಶಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಬೇಕು. ಯಾವುದೇ ಪ್ರಮುಖ ವಿಚಾರವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟರೆ ಅವರನ್ನು ಮಾಫಿ ಸಾಕ್ಷಿಯಿಂದ ಮತ್ತೆ ಆರೋಪಿಯನ್ನಾಗಿ ಮಾಡಲಾಗುವುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಮಾಫಿ ಸಾಕ್ಷಿಯಾಗಲು ತಮ್ಮ ಮೇಲೆ ಯಾವುದೇ ರೀತಿಯ ಒತ್ತಡ ಹೇರಲಾಗಿಲ್ಲ ಎಂದು ಪ್ರದೋಷ್ ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪ್ರಕರಣದ ವಿವಿಧ ಹಂತಗಳ ಕುರಿತು ಅವರು ನೀಡಲಿರುವ ಹೇಳಿಕೆಗಳು ತನಿಖಾ ಸಂಸ್ಥೆ ಹಾಗೂ ಪ್ರಾಸಿಕ್ಯೂಷನ್‌ಗೆ ಮಹತ್ವದ ಸಾಕ್ಷ್ಯವಾಗುವ ಸಾಧ್ಯತೆಯಿದೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!