ಫೆಬ್ರವರಿ 9 ರಂದು ಪ್ರಣಯಂ ರಿಲೀಸ್

ರಾಜವರ್ಧನ್ ನಟನೆಯ ‘ಪ್ರಣಯಂ’ ಸಿನಿಮಾ ಫೆಬ್ರವರಿ 9 ರಂದು ರಿಲೀಸ್ ಆಗಲಿದೆ.

ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.  ರಾಜವರ್ಧನ್, ನೈನಾ ಗಂಗೂಲಿ ಚಿತ್ರದ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಮೂಲಕ ಬಾಲಿವುಡ್ ನಟಿ ನೈನಾ ಗಂಗೂಲಿ ಕನ್ನಡಕ್ಕೆ ಪದಾರ್ಪಣೆ ಮಾಡಿದ್ದಾರೆ.

ಈ ಚಿತ್ರದಲ್ಲಿ ಜಯಂತ್ ಕಾಯ್ಕಿಣಿ ಅವರು 3 ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವಿ.ನಾಗೇಶ್ ಆಚಾರ್ಯ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಮದನ್ ಹರಿಣಿ ನೃತ್ಯ ಸಂಯೋಜನೆ, ಥ್ರಿಲ್ಲರ್ ಮಂಜು ಮತ್ತು ಮಾಸ್ ಮಾದ ಫೈಟ್ ನಿರ್ವಹಿಸಿದ್ದಾರೆ.

ಪ್ರಣಯಂ ಒಂದು ವಿಶಿಷ್ಟವಾದ ಪ್ರೇಮಕಥೆಯಾಗಿದೆ. ಸಾಮಾನ್ಯ ಕುಟುಂಬದಲ್ಲಿ ನಡೆಯುವ ನೈಜ ಘಟನೆಗಳಿಂದ ಚಿತ್ರವು ಸ್ಫೂರ್ತಿ ಪಡೆದಿದೆ ಎಂದು ನಿರ್ಮಾಪಕ ಪರಮೇಶ ತಿಳಿಸಿದ್ದಾರೆ.

ಚಿಕ್ಕಮಗಳೂರು ಮತ್ತು ಮಡಿಕೇರಿಯ ಸುಂದರವಾದ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ.  ಗೋವಿಂದೇಗೌಡ, ಮಂಥನ್, ಪ್ರಶಾಂತ್, ಸಮೀಕ್ಷಾ ಮತ್ತು ಪ್ರಿಯಾ ತರುಣ್ ಅಭಿನಯಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!