ಲವ್ಲಿ ಸ್ಟಾರ್ ಪ್ರೇಮ್ ಹೊಸ ಚಿತ್ರದ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ.
ಇನ್ನೂ ಹೆಸರಿಡದ ಹೊಸ ಚಿತ್ರದಲ್ಲಿ ಪ್ರೇಮ್ ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿದ್ದಾರೆ. ಪ್ರೇಮ್ ಜೊತೆ ಟಗರು ಪುಟ್ಟಿ ಖ್ಯಾತಿಯ ಮಾನ್ವಿತಾ ಕಾಮತ್ ಮೊದಲ ಬಾರಿಗೆ ಜೋಡಿಯಾಗಿ ನಟಿಸಿದ್ದಾರೆ. ಜೂಟಾಟ, ಗುಬ್ಬಚ್ಚಿ ಸಿನಿಮಾ ಖ್ಯಾತಿಯ ಅಥರ್ವ್ ಆರ್ಯ ನಿರ್ದೇಶನದಲ್ಲಿ ಈ ಚಿತ್ರ ಬರುತ್ತಿದೆ.
ಚಿತ್ರದಲ್ಲಿ ತಬಲಾ ನಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.
ಕೆಆರ್ಎಸ್ ಪ್ರೊಡಕ್ಷನ್ಸ್ ಅಡಿ ತಬಲಾ ನಾಣಿ ಹಾಗೂ ಸ್ನೇಹಿತರು ಜೊತೆಗೂಡಿ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ. ತಂದೆಯ ಮಹತ್ವ ಸಾರುವ, ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ಆತ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎಂಬುದು ಕಥೆಯ ತಿರುಳು ಆಗಿದೆ. ಇಲ್ಲಿ ತಂದೆಯಾಗಿ ತಬಲಾ ನಾಣಿ ಬಣ್ಣ ಹಚ್ಚಿದ್ದಾರೆ. ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಯ ಆಗುತ್ತಿದ್ದಾರೆ.
ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಾಫಿ ಇದೆ. ಆಕಾಶ್ ಪರ್ವ ಸಂಗೀತ ನಿರ್ದೇಶನ ಇರುವ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, ಕೆ. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ.
ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
——-
Be the first to comment