ಲವ್ಲೀ ಸ್ಟಾರ್ ಪ್ರೇಮ್ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ 25ನೆಯ ದಿನದತ್ತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ನ.12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸಿನಿಮಾದ ಪ್ರೇಮಕಥೆ ವಿಭಿನ್ನವಾಗಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಪ್ರೇಕ್ಷಕರ ವಿನಂತಿ ಮೇರೆಗೆ ಸಿನಿಮಾದ ದೀರ್ಘ ಅವಧಿಯನ್ನು ಈಗಾಗಲೇ 11 ನಿಮಿಷ ಕಡಿತ ಮಾಡಿ ಪ್ರದರ್ಶನ ಮಾಡಲಾಗುತ್ತಿದೆ. ಪ್ರೇಮ್ ಅವರ 25ನೆಯ ಸಿನಿಮಾ ಆಗಿರುವ ‘ಪ್ರೇಮಂ ಪೂಜ್ಯಂ’ ಸಿನಿಮಾವನ್ನು ರಾಘವೇಂದ್ರ ಬಿಎಸ್ ನಿರ್ದೇಶನ ಮಾಡಿದ್ದಾರೆ. ಸಂಗೀತವನ್ನೂ ಅವರೇ ನೀಡಿದ್ದಾರೆ.
ಚಿತ್ರದಲ್ಲಿ ಬೃಂದಾ ಆಚಾರ್ಯ, ಐಂದ್ರಿತಾ ರೇ ನಾಯಕಿಯರಾಗಿ ನಟಿಸಿದ್ದಾರೆ. ಅವಿನಾಶ್, ಮಾಸ್ಟರ್ ಆನಂದ್, ಸಾಧು ಕೋಕಿಲ, ಮಾಳವಿಕ ಅವಿನಾಶ್, ಟಿ.ಎಸ್.ನಾಗಾಭರಣ ಸೇರಿದಂತೆ ಇನ್ನೂ ಹಲವರು ತಾರಾಬಳಗದಲ್ಲಿದ್ದಾರೆ.
ಸಂಗೀತಮಯ ಆಗಿರುವ ‘ಪ್ರೇಮಂ ಪೂಜ್ಯಂ’ ಚಿತ್ರಕ್ಕೆ ಹರಿಹರನ್ , ಮೋಹಿತ್ ಚೌಹಾಣ್, ವಿಜಯ್ ಪ್ರಕಾಶ್, ಸೋನು ನಿಗಮ್, ಅರ್ಮಾನ್ ಮಲಿಕ್ ಸೇರಿದಂತೆ ಹಲವು ಗಾಯಕರು ಹಾಡಿದ್ದಾರೆ.
ಚಿತ್ರಕ್ಕೆ ರಕ್ಷಿತ್ ಕೆಡಂಬಾಡಿ, ಡಾ.ರಾಜ್ ಕುಮಾರ್ ಜಾನಕಿ ರಾಮನ್, ಡಾ. ರಾಘವೇಂದ್ರ ಎಸ್, ಮನೋಜ್ ಕೃಷ್ಣನ್ ಅವರು ಬಂಡವಾಳ ಹಾಕಿದ್ದಾರೆ. ನವೀನ್ ಕುಮಾರ್ ಅವರ ಛಾಯಾಗ್ರಹಣ, ಹರೀಶ್ ಕೊಮ್ಮೆ ಅವರ ಸಂಕಲನ ಇದೆ.
___







Be the first to comment