ಪ್ರೇಮಂ ಪೂಜ್ಯಂನ ನಿನ್ನನು ಬಿಟ್ಟು ಸಾಂಗ್ ರಿಲೀಸ್

ಪ್ರೇಮಂ ಪೂಜ್ಯಂ ಚಿತ್ರದ ಬಹು ನಿರೀಕ್ಷಿತ ” ನಿನ್ನನು ಬಿಟ್ಟು ನಾ ಹೇಗಿರಲಿ? ” ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು ಚಿತ್ರಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಹಬಾಜ್ ಅಮನ್ ಹಾಡಿರುವ ಹಾಡು ಅ.6ರಂದು ಯೂ ಟ್ಯೂಬ್ ನಲ್ಲಿ ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಆದ ಒಂದು ದಿನದ ಒಳಗೆ 17 ಸಾವಿರಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿ ಚಿತ್ರ ತಂಡದ ಬೆನ್ನು ತಟ್ಟಿದ್ದಾರೆ.

ಈ ಹಾಡನ್ನು ಡಾ. ಬಿ. ಎಸ್. ರಾಘವೇಂದ್ರ ರಚಿಸುವ ಜೊತೆಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಚಿತ್ರತಂಡ, ಸೋನು ನಿಗಮ್ ಅವರ ಧ್ವನಿಯಲ್ಲಿ ಮೂಡಿ ಬಂದ “ಓ ಭಾನ ಮೋಡಗಳೇ, ನನ್ನ ಕತೆಯನು ಕೇಳುವಿರಿ ” ಸಾಂಗ್ ಮೆಚ್ಚುಗೆಗೆ ಪಾತ್ರವಾಗಿತ್ತು. ಲವ್ಲಿ ಸ್ಟಾರ್ ಪ್ರೇಮ್ ನಟಿಸಿರುವ ಈ ಚಿತ್ರದ ಬಹುತೇಕ ಎಲ್ಲಾ ಹಾಡುಗಳು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿವೆ. ಡಾ. ಸಂದೀಪ್, ಸಾಧುಕೋಕಿಲ, ಅರ್ಮಾನ್ ಮಲಿಕ್ ಸೇರಿದಂತೆ ಪ್ರಖ್ಯಾತ ಗಾಯಕರು ಚಿತ್ರಕ್ಕೆ ಹಾಡಿದ್ದಾರೆ.

ಅಕ್ಟೋಬರ್ 29ರಂದು ಬೆಳ್ಳಿತೆರೆಗೆ ಬರಲಿರುವ ಪ್ರೇಮಂ ಪೂಜ್ಯಂ ಚಿತ್ರ ನಟ ಪ್ರೇಮ್ ಅವರ 25 ನೇ ಸಿನಿಮಾ ಆಗಿದೆ. ಟ್ರೈಲರ್, ಹಾಡಿನ ಮೂಲಕ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿ ಹಾಕಿದೆ. ರೋಮ್ಯಾಂಟಿಕ್ ಜಾನರ್ ಆಗಿರುವ ಚಿತ್ರಕ್ಕೆ ಡಾ. ಬಿ. ಎಸ್. ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ.

ಚಿತ್ರಕ್ಕೆ ರಕ್ಷಿತ್ ಕೆಡಂಬಾಡಿ, ಡಾ.ರಾಜ್ ಕುಮಾರ್ ಜಾನಕಿ ರಾಮನ್, ಡಾ. ರಾಘವೇಂದ್ರ ಎಸ್, ಮನೋಜ್ ಕೃಷ್ಣನ್ ಅವರು ಬಂಡವಾಳ ಹಾಕಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ ಇದೆ. ಚಿತ್ರದಲ್ಲಿ ಬೃಂದಾ ಆಚಾರ್ಯ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಐಂದ್ರಿತಾ ರೇ, ಮಾಸ್ಟರ್ ಆನಂದ್, ಮಾಳವಿಕಾ ಅವಿನಾಶ್ ಮುಂತಾದವರು ನಟಿಸಿದ್ದಾರೆ.

 

 

 

 

 

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!