Pretha Audio: ಪ್ರೇತ ಆಡಿಯೋ ಲಾಂಚ್

ಹರೀಶ್ ರಾಜ್ ನಟನೆಯ ಪ್ರೇತ ಸಿನಿಮಾದ ಆಡಿಯೋ ಲಾಂಚ್ ಇತ್ತೀಚೆಗೆ ನಡೆಯಿತು.

ಬೆಂಗಳೂರಿನಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವ ಬೈರತಿ ಸುರೇಶ್ ಆಡಿಯೋ ಲಾಂಚ್ ಮಾಡಿ ಶುಭ ಹಾರೈಸಿದರು. ಕಾಂತಾರದ ನಟಿ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಭಾಗಿ ಆಗಿದ್ದರು.

ಪ್ರೇತ ಸಿನಿಮಾದ ದೂರದ ಊರಿಗೆ ಎಂಬ ಹಾಡು HRP ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಭಾವುಕ ಗೀತೆಗೆ ನವೀನ್ ಸಜ್ಜು ಧ್ವನಿಯಾಗಿದ್ದು, ಪ್ರವೀಣ್ ಶ್ರೀನಿವಾಸ್ ಮೂರ್ತಿ ಟ್ಯೂನ್ ಹಾಕಿದ್ದಾರೆ. ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಹರೀಶ್ ರಾಜ್ ಅವರ ‘ಹರೀಶ್ ರಾಜ್ ಪ್ರೊಡಕ್ಷನ್’ನ ಐದನೇ ಕೊಡುಗೆ ಪ್ರೇತ ಆಗಿದೆ. ಈ ಪ್ರೊಡಕ್ಷನ್ ಮೂಲಕ ಈಗಾಗಲೇ ‌ನಾಲ್ಕು ಸಿನಿಮಾಗಳು ನಿರ್ಮಾಣವಾಗಿದೆ. ಹರೀಶ್ ರಾಜ್ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಪ್ರೇತ ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿಬರುತ್ತಿದೆ. ವಿರಾಜಪೇಟೆ ಮತ್ತು ಮಡಿಕೇರಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು 3 ವವರ್ಷ ಬಳಿಕ ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಶೀರ್ಷಿಕೆಯೇ ಹೇಳುವಂತೆ ‘ಪ್ರೇತ’ ಒಂದು ಹಾರರ್​ ಕಥೆಯುಳ್ಳ ಸಿನಿಮಾ. ಹರೀಶ್ ರಾಜ್​ ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಹರೀಶ್ ರಾಜ್​ ಜೊತೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ, ಬಿ.ಎಂ. ವೆಂಕಟೇಶ್, ಅಮಿತ್ ಅವರು ನಟಿಸಿದ್ದಾರೆ.

ಕಿರಣ್ ಆರ್. ಹೆಮ್ಮಿಗೆ ಸಂಭಾಷಣೆ, ಶಿವಶಂಕರ್ ಛಾಯಾಗ್ರಹಣ ಮಾಡಿದ್ದಾರೆ. ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ ಈ ಚಿತ್ರಕ್ಕಿದೆ. ಜೀವನ್ ಪ್ರಕಾಶ್ ಸಂಕಲನ, ಮಂಜು ಕಲಾ ನಿರ್ದೇಶನ ಮಾಡಿದ್ದಾರೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!