ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ ಪಾತ್ರಗಳಲ್ಲಿರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾಕ್ಕೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಎಂಟ್ರಿ ನೀಡಿದ್ದಾರೆ.
ಹೇಮಂತ್ ರಾವ್ ಅವರು ಇದೀಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹೇಮಂತ್ ರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಾ ಮೋಹನ್ ಅವರ ಪೋಸ್ಟರ್ ಹಂಚಿಕೊಂಡಿದ್ದಾರೆ.
ಅವ್ಯವಸ್ಥೆಯ ನಡುವೆ ಹಾರುವ ಚಿಟ್ಟೆ’ ಎಂದು ಪ್ರಿಯಾಂಕಾ ಪಾತ್ರವನ್ನು ಹೇಮಂತ್ ರಾವ್ ಬಣ್ಣಿಸಿದ್ದಾರೆ. ಈಗ ಬಿಡುಗಡೆ ಮಾಡಲಾಗಿರುವ ಪೋಸ್ಟರ್ನಲ್ಲಿ ಪ್ರಿಯಾಂಕಾ ಮೋಹನ್ ಬಲು ಸುಂದರವಾಗಿ ಕಾಣುತ್ತಿದ್ದಾರೆ. ಅವರ ಪೋಷಾಕು, ಸ್ಟೈಲ್ 80ರ ದಶಕದ ಯುವತಿಯನ್ನು ನೆನಪಿಸುತ್ತಿದೆ.
‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಕತೆ ನಡೆಯುವುದೇ 70-80ರ ದಶಕದಲ್ಲಿ. ಡಾಲಿ ಧನಂಜಯ್, ಶಿವಣ್ಣ ಅವರ ಪೋಸ್ಟರ್ಗಳು ಇದನ್ನು ಸ್ಪಷ್ಟವಾಗಿ ಹೇಳುತ್ತಿವೆ. ಇದೀಗ ಪ್ರಿಯಾಂಕಾ ಮೋಹನ್ ಪೋಸ್ಟರ್ ಇದನ್ನು ಸ್ಪಷ್ಟವಾಗಿ ಹೇಳುತ್ತಿದೆ.
ಬೆಂಗಳೂರಿನ ಯುವತಿ ಪ್ರಿಯಾಂಕಾ ಮೋಹನ್ ಕನ್ನಡದ ‘ಒಂದು ಕಥೆ ಹೇಳ್ಲಾ’ ಸಿನಿಮಾದ ಮೂಲಕ ಎಂಟ್ರಿ ಕೊಟ್ಟರು. ಬಳಿಕ ತೆಲುಗು ಮತ್ತು ತಮಿಳಿನಲ್ಲಿ ಅವಕಾಶಗಳು ಬಂದವು. ನಾನಿ ಜೊತೆ ‘ನಾನಿಸ್ ಗ್ಯಾಂಗ್ ಲೀಡರ್’, ‘ಸರಿಪೋದಾ ಶನಿವಾರಂ’, ಧನುಶ್ ಜೊತೆ ‘ಕ್ಯಾಪ್ಟನ್ ಮಿಲ್ಲರ್’ ಪವನ್ ಕಲ್ಯಾಣ್ ಜೊತೆಗೆ ‘ಓಜಿ’ ಸಿನಿಮಾಗಳಲ್ಲಿ ಪ್ರಿಯಾಂಕಾ ಮೋಹನ್ ನಟಿಸಿದ್ದಾರೆ.
‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದ್ದು, ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಬೇಕಾಗಿದೆ.
—-





Be the first to comment