‘ಕೊರಗಜ್ಜ’ ಹಾಡಿನ ರೀಲ್ಸ್ ಗೆ ಕೋಟಿ ರೂಪಾಯಿ!

‘ಕೊರಗಜ್ಜ’ ಹಾಡುಗಳಿಗೆ ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ  ‘ಕೊರಗಜ್ಜ’ ಸಿನಿಮಾ ತಂಡ ಘೋಷಿಸಿದೆ.

ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗೆ  ಅದ್ಧೂರಿಯಾಗಿ ಬಿಡುಗಡೆಗೊಂಡಿವೆ. ಈ ಸಂದರ್ಭದಲ್ಲಿ ಚಿತ್ರತಂಡ ಬಹುಮಾನ ಘೋಷಣೆ ಮಾಡಿದೆ. ಅತ್ಯುತ್ತಮ ರೀಲ್ಸ್‌ಗಳನ್ನು ಆಯ್ಕೆ ಮಾಡಿ ಬಹುಮಾನ ವಿತರಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ.  ಸಿನಿಮಾ ತಂಡ ಕೋಟಿ ರೂಪಾಯಿ ಬಹುಮಾನ ಘೋಷಿಸಿ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ.

ಬಿಗ್ ಎಫ್‌ಎಂ 92.7 ಹಾಗೂ ಇತರೆ ಆಡಿಯೋ ಪ್ಲಾಟ್‌ಫಾರ್ಮ್‌ಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಪತ್ರಕರ್ತರ ಸಮ್ಮುಖದಲ್ಲಿ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿಗ್ ಎಫ್‌ಎಂ ದಕ್ಷಿಣ ಭಾರತದ ಮುಖ್ಯಸ್ಥ ವಿಶ್ವಾಸ್,  ಶರೋನ್ ಪ್ರಭಾಕರ್, ಹಿರಿಯ ನಟಿ ಭವ್ಯ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೈವದ ಕಥೆಯ ಹಿನ್ನೆಲೆಯಲ್ಲಿರುವ ‘ಕೊರಗಜ್ಜ’ ಸಿನಿಮಾ  ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ. ಸಿನಿಮಾ ‘ತ್ರಿವಿಕ್ರಮ ಸಿನಿಮಾಸ್’ ಹಾಗೂ ‘ಸಕ್ಸಸ್ ಫಿಲ್ಮ್ಸ್’ ಬ್ಯಾನರ್‌ಗಳಲ್ಲಿ ನಿರ್ಮಾಣವಾಗಿದೆ.

—-

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!