ಯೋಜನೆಗಳ ಪ್ರಕಾರ ಈ ಹೊತ್ತಿಗೆ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರವೊಂದನ್ನು ಸತ್ಯಪ್ರಕಾಶ್ ನಿರ್ದೇಶನ ಮಾಡಬೇಕಿತ್ತು. ಕೋವಿಡ್ ಮತ್ತು ಲಾಕ್ ಡೌನ್ ನಿರ್ಬಂಧಗಳಿಂದಾಗಿ ಆ ಚಿತ್ರವು ಸ್ವಲ್ಪ ತಡವಾಗುತ್ತಾ ಬಂದಿತ್ತು. ಆ ಚಿತ್ರದ ಚರ್ಚೆಯ ಸಂದರ್ಭದಲ್ಲೇ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದ ಎಳೆಯನ್ನು ಸತ್ಯಪ್ರಕಾಶ್ ಪುನೀತ್ ಅವರ ಬಳಿ ಹೇಳಿದ್ದರು. ಹೊಸ ಕಲಾವಿದರಿಗಾಗಿಯೇ ತಯಾರಿಸಿದ್ದ ಆ ಕಥೆಯ ವಸ್ತು ಹಾಗೂ ಚಿತ್ರಕಥೆಯಲ್ಲಿದ್ದ ಹೊಸತನ, ಪುನೀತ್ ಅವರಿಗೂ ಸಹ ಮೆಚ್ಚುಗೆಯಾಗಿ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಇತ್ತರು. ಆಗ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.
ಪಿ ಆರ್ ಕೆ ಮತ್ತು ಸತ್ಯ & ಮಯೂರ ಪಿಕ್ಚರ್ಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಈ ಚಿತ್ರವು ಏಪ್ರಿಲ್ ನಲ್ಲಿ ಶುರುವಾಗಿ, ಬಹುತೇಕ ಚಿತ್ರೀಕರಣ ಮುಗಿಸಿದೆ. ಈಗ ನಿರ್ಮಾಣಾನಂತರ ಕೆಲಸಗಳು ನಡೆಯುತ್ತಿದ್ದು, ಮೊನ್ನೆ ನಡೆದ ಚಿತ್ರದ ಅಂತಿಮ ಹಂತದ ಚಿತ್ರೀಕರಣಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ ನೀಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು.
Be the first to comment