ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟುಹಬ್ಬ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಿದೆ.
ಬೆಂಗಳೂರು ಕೇಂದ್ರ ಅಂಚೆ ಕಾರ್ಯಾಲಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅಪ್ಪು ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.
ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರ ಮತ್ತು ಅವರ ಸಿನಿ ಪಯಣವನ್ನು ಬಿಂಬಿಸುವ ಚಿತ್ರಗಳು ಈ ಪೋಸ್ಟ್ ಕಾರ್ಡ್ ನಲ್ಲಿದೆ. ಇದು ಅವರ ಅಭಿಮಾಣಿಗಳಿಗೆ ಖುಷಿ ಕೊಟ್ಟಿದೆ.
ಮಾರ್ಚ್ 17 ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟುಹಬ್ಬ ಆಗಿದೆ. ಪುನೀತ್ ರಾಜ್ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾರ್ಚ್ 14ಕ್ಕೆ ಅವರ ಮೊದಲ ಚಿತ್ರ ‘ಅಪ್ಪು’ ಥಿಯೇಟರ್ಗಳಲ್ಲಿ ‘ ರೀ- ರೀಲಿಸ್ ಆಗಲಿದೆ.

Be the first to comment