ಜೇಮ್ಸ್ ಚಿತ್ರದ ಪೋಸ್ಟರ್ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೀರೋ ಆಗಿರುವ ‘ಜೇಮ್ಸ್’ ಸಿನಿಮಾದ ಪೋಸ್ಟರ್ ಸ್ವಾತಂತ್ರ್ಯೋತ್ಸವದ ದಿನವಾದ ಇಂದು ಬಿಡುಗಡೆ ಆಗಿದ್ದು ಗಮನ ಸೆಳೆಯುತ್ತಿದೆ.

ಚೇತನ್ ಕುಮಾರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಜೇಮ್ಸ್ ಸಿನಿಮಾದ ಪೋಸ್ಟರ್ ನಲ್ಲಿ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಪಡೆಯ ಜೊತೆ ಪುನೀತ್ ಕಾಣಿಸಿಕೊಂಡಿದ್ದಾರೆ. “ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್ ” ಎಂದು ಸಬ್ ಟೈಟಲ್ ನೀಡಲಾಗಿದೆ.
ರಾಜಕುಮಾರ’ ಸಿನಿಮಾದಲ್ಲಿ ನಾಯಕಿಯಾಗಿದ್ದ ಪ್ರಿಯಾ ಆನಂದ್ ಈಗ ಜೇಮ್ಸ್ ಚಿತ್ರದ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ತಮಿಳು ನಟ ಶರತ್ ಕುಮಾರ್ ವಿಲನ್ ಪಾತ್ರ ಮಾಡಿದ್ದಾರೆ. ಚಿಕ್ಕಣ್ಣ, ಹರ್ಷ, ರಂಗಾಯಣ ರಘು, ಶೈನ್ ಶೆಟ್ಟಿ, ಕಾವ್ಯ ಶಾಸ್ತ್ರಿ, ನಯನಾ, ಅನು ಪ್ರಭಾಕರ್, ಶ್ರೀಕಾಂತ್, ಆದಿತ್ಯ ಮೆನನ್ ನಟಿಸಿದ್ದಾರೆ.

ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು ಇತ್ತೀಚಿಗಷ್ಟೇ ಆಕ್ಷನ್ ಭಾಗದ ಚಿತ್ರೀಕರಣ ನಡೆದಿತ್ತು. ಸಿನಿಮಾ ಬಹು ತಾರಾಗಣವನ್ನು ಹೊಂದಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಜೇಮ್ಸ್’ ಸಿನಿಮಾ ಮುಗಿದ ಬಳಿಕ ಪುನೀತ್ ರಾಜ್ ಕುಮಾರ್ ಅವರು ಲೂಸಿಯಾ ಖ್ಯಾತಿಯ ಪವನ್ ಕುಮಾರ್ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲಿ ನಟಿಸಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!