ಪುನೀತ್ ನಾಯಕಿಯಾಗಿ ತ್ರಿಷಾ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಹೊಸ ಸಿನಿಮಾ ‘ದ್ವಿತ್ವ’ ದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟಿ ತ್ರಿಷಾ ಕೃಷ್ಣನ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಚಿತ್ರತಂಡ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದ್ದು ಈಗಾಗಲೇ ತ್ರಿಷಾ ಬಳಿ ಮಾತುಕತೆ ನಡೆಸಿದೆ. ಕಥೆ ಬಗ್ಗೆ ತ್ರಿಷಾ ತುಂಬಾ ಸಂತೋಷ ಪಟ್ಟಿದ್ದಾರೆ ಎಂದು ಹೇಳಲಾಗಿದೆ.

ತ್ರಿಷಾ ಈ ಹಿಂದೆ ಪುನೀತ್ ಜೊತೆ ನಾಯಕಿಯಾಗಿ ನಟಿಸಿದ್ದರು. 2014ರ ‘ಪವರ್ ಸ್ಟಾರ್’ ಸಿನಿಮಾದಲ್ಲಿ ತ್ರಿಷಾ ನಟಿಸುವ ಮೂಲಕ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಸಿನೆಮಾ ಪುನೀತ್ ಜೊತೆಗೆ ಎರಡನೇ ಚಿತ್ರ ಆಗಲಿದೆ.

ಪವನ್ ಕುಮಾರ್ ನಿರ್ದೇಶನದ ಈ ಚಿತ್ರ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಯು ಟರ್ನ್ ಸಿನಿಮಾ ಬಳಿಕ ಕನ್ನಡದಲ್ಲಿ ಪವನ್ ಕುಮಾರ್ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.

ಪುನೀತ್ ಈಗ ‘ಜೇಮ್ಸ್ ‘ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಮುಗಿದ ಬಳಿಕ ‘ದ್ವಿತ್ವ ‘ ಚಿತ್ರ ಪ್ರಾರಂಭ ಆಗಲಿದೆ. ಈ ಚಿತ್ರದಲ್ಲಿ ಪವನ್ ಕುಮಾರ್ – ಪುನೀತ್ ಜತೆ ಆಗಿರುವುದು ಚಿತ್ರ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!