ಬೆಂಗಳೂರಿನ ಖಾಸಗಿ ಶಾಲೆಯೊಂದು ಪರೀಕ್ಷೆಯಲ್ಲಿ ಮಕ್ಕಳಿಗೆ ಪುನೀತ್ ರಾಜ್ಕುಮಾರ್ ಕುರಿತು ಪ್ರಶ್ನೆ ಕೇಳುವ ಮೂಲಕ ಅಪ್ಪು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ವಿಷಯದ ಪರೀಕ್ಷೆ ನಡೆಸಲಾಗಿದ್ದು, ಪ್ರಶ್ನೆ ಪತ್ರಿಕೆಯಲ್ಲಿ ಪುನೀತ್ ರಾಜ್ಕುಮಾರ್ ಕುರಿತು ಪ್ರಶ್ನೆ ಕೇಳಲಾಗಿದೆ. ಅದರ ಫೋಟೋ ವೈರಲ್ ಆಗಿದೆ.
ಗದ್ಯ ಭಾಗವನ್ನು ಓದಿ, ಪ್ರಶ್ನೆಗಳಿಗೆ ಉತ್ತರಿಸುವ ವಿಭಾಗದಲ್ಲಿ ಪುನೀತ್ ರಾಜ್ಕುಮಾರ್ ಅವರ ಕಿರು ಪರಿಚಯ ಮತ್ತು ಸಾಧನೆ ಬಗ್ಗೆ ಮಾಹಿತಿ ನೀಡಲಾಗಿದೆ. ಅದನ್ನು ಓದಿಕೊಂಡು, ಮುಂದಿನ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯಲು ಪ್ರಶ್ನೆ ಪತ್ರಿಕೆ ತಯಾರು ಮಾಡಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ಪ್ರಶ್ನೆ ಪತ್ರಿಕೆಯ ಫೋಟೋ ವೈರಲ್ ಆಗುತ್ತಿದೆ. ಮಕ್ಕಳಿಗೆ ಪುನೀತ್ ಕುರಿತು ತಿಳಿಸಲು ಶಾಲೆಯವರು ಮಾಡಿರುವ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಶಾಲೆಯ ಪಠ್ಯದಲ್ಲಿ ಪುನೀತ್ ರಾಜ್ಕುಮಾರ್ ಅವರ ಸಾಧನೆ ಮತ್ತು ಜನಪರ ಕಾರ್ಯಗಳ ಬಗ್ಗೆ ಪಾಠ ಅಳವಡಿಸಬೇಕು ಎಂಬ ಅಭಿಪ್ರಾಯ ಈ ಹಿಂದೆ ವ್ಯಕ್ತವಾಗಿತ್ತು.
ಪುನೀತ್ ರಾಜ್ಕುಮಾರ್ ಅವರು ಬಾಲನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ‘ಅಪ್ಪು’ ಸಿನಿಮಾ ಮೂಲಕ ಹೀರೋ ಆದರು. ಗಾಯಕನಾಗಿ, ನಿರ್ಮಾಪಕನಾಗಿ ಚಿತ್ರರಂಗಕ್ಕೆ ಕೊಡುಗೆ ನೀಡಿದರು. ‘ಪಿಆರ್ಕೆ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡಿದರು.
ಅಕಾಲಿಕವಾಗಿ ಅಗಲಿದ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಬಿಡುಗಡೆ ಆಗಿದ್ದು ಸೂಪರ್ ಹಿಟ್ ಎನಿಸಿದೆ.
ಜೇಮ್ಸ್’ ಮಾ.17ರಂದು ಅವರ ಜನ್ಮದಿನದಂದು ತೆರೆ ಕಂಡಿದೆ. ಈ ಸಿನಿಮಾ ನಾಲ್ಕು ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿದೆ ಎಂದು ವರದಿ ಆಗಿದೆ.
________

Be the first to comment