ಪುಷ್ಪ 2 ಸಿನಿಮಾ ರಿಲೀಸ್ ಮುನ್ನವೇ ಭರ್ಜರಿ ಹಣವನ್ನು ಕೊಳ್ಳೆ ಹೊಡೆಯುವ ಸಾಧ್ಯತೆ ಹೆಚ್ಚಿದೆ.
ಸಿನಿಮಾ ಮೇಕರ್ಸ್ ಎಲ್ಲಾ ಭಾಷೆಗಳ ಥಿಯೇಟ್ರಿಕಲ್ ರೈಟ್ಸ್ ಡೀಲ್ಗಾಗಿ ರೂ 1,000 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ವೆಬ್ ಸೈಟ್ ಒಂದು ವರದಿ ಮಾಡಿದೆ.
ಪುಷ್ಪ 2 ಸಿನಿಮಾವನ್ನು ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿಯಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಏಕಕಾಲದಲ್ಲಿ ದೇಶ-ವಿದೇಶಗಳಲ್ಲಿ ಪುಷ್ಪ 2 ಚಿತ್ರ ರಿಲೀಸ್ ಆಗಲಿದೆ ಎನ್ನುವ ಮಾತು ಕೇಳಿ ಬಂದಿದೆ.
ಪುಷ್ಪ 2 ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾವನ್ನು ಗೆಲ್ಲಿಸಲು ಭಾರೀ ಪ್ಲಾನ್ ಮಾಡಲಾಗಿದೆ. ವಿಶ್ವದಾದ್ಯಂತ ಅಲ್ಲು ಅರ್ಜುನ್ ಕ್ರೇಜ್ ಕೂಡ ಹೆಚ್ಚಾಗಿದೆ. ಪುಷ್ಪ 2 ಚಿತ್ರ ರಾಜಮೌಳಿಯವರ RRR ದಾಖಲೆಗಳನ್ನು ಉಡೀಸ್ ಮಾಡುವ ನಿರೀಕ್ಷೆಯಿದೆ.
ನಿರ್ದೇಶಕ ಸುಕುಮಾರ್ ಬೇಗನೆ ಶೂಟಿಂಗ್ ಕಂಪ್ಲೀಟ್ ಮಾಡುವ ಆತುರದಲ್ಲಿದ್ದಾರೆ. ಅಲ್ಲು ಅರ್ಜುನ್ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
___

Be the first to comment