ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ 2 ಸಿನಿಮಾ ಬಿಡುಗಡೆಯಾಗಿ ನಾಲ್ಕು ವಾರ ಕಳೆದರೂ, ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ತನ್ನ ಓಟವನ್ನು ಮುಂದುವರಿಸಿದೆ.
ನಾಲ್ಕನೇ ವಾರದಲ್ಲಿ ಚಿತ್ರ 1,799 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಚಿತ್ರತಂಡ ಗುರುವಾರ ಪ್ರಕಟಿಸಿದೆ. ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಸಮೀಪಿಸುತ್ತಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ತನ್ನ ಓಟ ಮುಂದುವರಿಸಿದೆ.
ಅಲ್ಲು ಅರ್ಜುನ್ ಅವರ ಪುಷ್ಪ ರಾಜ್‌ನ ಹೊಸ ಪೋಸ್ಟರ್ ಹಂಚಿಕೊಂಡಿರುವ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್, ಬಿಡುಗಡೆಯಾದ 28 ದಿನಗಳಲ್ಲಿ ಪುಷ್ಪ 2 ವಿಶ್ವದಾದ್ಯಂತ 1,799 ಕೋಟಿ ರೂ. ಕಲೆಕ್ಷನ್ ಮಾಡಿದೆ. ‘#Pushpa2TheRule ಭಾರತದ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಪುಷ್ಪ 2 ಬ್ಲಾಕ್‌ಬಸ್ಟರ್ 4 ವಾರಗಳಲ್ಲಿ ವಿಶ್ವದಾದ್ಯಂತ 1,799 ಕೋಟಿ ರೂ. ಗಳಿಸಿದೆ. ಈ ಮೂಲಕ ಚಿತ್ರವು ಅಮೀರ್ ಖಾನ್ ನಟನೆಯ ದಂಗಲ್ ಸಿನಿಮಾದ 2,000 ಕೋಟಿ ರೂ. ಗಳಿಕೆಯತ್ತ ಸಾಗುತ್ತಿದೆ’ ಎಂದಿದೆ.
ಶಂಕರ್ ಅವರ ರಾಮ್ ಚರಣ್ ಅಭಿನಯದ ಗೇಮ್ ಚೇಂಜರ್ ಚಿತ್ರ ಸಂಕ್ರಾಂತಿಯಂದು ಬಿಡುಗಡೆಯಾಗಲಿದೆ. ಗೇಮ್ ಚೇಂಜರ್ ಚಿತ್ರ, ಪುಷ್ಪ 2 ಚಿತ್ರದ ಗಳಿಕೆ ಮೇಲೆ ಪರಿಣಾಮ ಉಂಟುಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
—-
Be the first to comment