Ajagrata: ‘ಅಜಾಗ್ರತ’ ಮೂಲಕ ಬರುತ್ತಿದ್ದಾರೆ ಸ್ಯಾಂಡಲ್​ವುಡ್​ ಸ್ವೀಟಿ

ಸೌಂದರ್ಯ ಹಾಗೂ ಅಭಿನಯದಿಂದಲೇ ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಸ್ಯಾಂಡಲ್​ವುಡ್​ ಸ್ವೀಟಿ ರಾಧಿಕಾ ಕುಮಾರಸ್ವಾಮಿ ‘ಅಜಾಗ್ರತ’ ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದಾರೆ.

ಮಹಿಳಾ ಪ್ರಧಾನ ಚಿತ್ರಗಳಲ್ಲಿ ಹೆಚ್ಚಾಗಿ ನಟಿಸುತ್ತಿರುವ ಸ್ವೀಟಿ ರಾಧಿಕಾ ‘ರವಿ ಬೋಪಣ್ಣ’ ಚಿತ್ರದ ಬಳಿಕ ಏಳು ಭಾಷೆಗಳಲ್ಲಿ ಸಿನಿಮಾ‌ ಮಾಡಲು ಸಿದ್ಧರಾಗಿದ್ದಾರೆ.

‘ಅಜಾಗ್ರತ’ ಎಂದು ಟೈಟಲ್ ಇಡಲಾಗಿದ್ದು, ಇದೊಂದು ಸೈಕಾಲಜಿಕಲ್ ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿರುವ ಚಿತ್ರವಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ‘ಅಜಾಗ್ರತ’ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ‌.‌ ಇತ್ತೀಚೆಗೆ ಚಿತ್ರದ ಮುಹೂರ್ತ ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆದಿದೆ.

ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಅಲ್ಲದೆ ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ, ಮುಂತಾದವರು ಅಭಿನಯಿಸುತ್ತಿದ್ದಾರೆ. ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್, ಕಾಲಿವುಡ್ ಚಿತ್ರರಂಗದಿಂದ ಆದಿತ್ಯ ಮೆನನ್, ಸಮುದ್ರ ಕಣಿ, ಜಯ ಪ್ರಕಾಶ್ ಮತ್ತು ಬಾಲಿವುಡ್​ನ ಶ್ರೇಯಸ್ ತಲಪಾಡೆ ನಾಯಕ ನಟನಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ರವಿರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಯುವ ನಿರ್ದೇಶಕ ಎಂ ಶಶಿಧರ್ ಚಿತ್ರ ನಿರ್ದೇಶಿಸುತ್ತಿದ್ದಾರೆ.

14ನೇ ವಯಸ್ಸಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಸ್ಟಾರ್​ ನಟಿಯಾಗಿ ಮಿಂಚುತ್ತಿರುವವರು ರಾಧಿಕಾ ಕುಮಾರಸ್ವಾಮಿ ಸೃಜನ್ ಲೋಕೇಶ್ ಜೊತೆ ‘ನೀಲಮೇಘಶ್ಯಾಮ’ ಚಿತ್ರದ ಮೂಲಕ ಅಭಿನಯ ಆರಂಭಿಸಿದರು. ವಿಜಯ್ ರಾಘವೇಂದ್ರ ಜೊತೆ ನಟಿಸಿದ ‘ನಿನಗಾಗಿ’ ಸಿನಿಮಾ ರಾಧಿಕಾಗೆ ಒಳ್ಳೆ ಹೆಸರು ತಂದಿತು.

ಮದುವೆಯಾಗಿ ಒಂದು ಮಗುವಾದ ನಂತರ ಕೆಲ ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರ ಉಳಿದ ರಾಧಿಕಾ, ದಮಯಂತಿ ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ್ದರು.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!