Jaggesh: ‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಡೇಟ್ ಫಿಕ್ಸ್

ನವರಸ ನಾಯಕ ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ರಿಲೀಸ್ ಡೇಟ್ ಘೋಷಣೆಯಾಗಿದೆ.

ಜಗ್ಗೇಶ್ ಹುಟ್ಟುಹಬ್ಬದ ಸಂಭ್ರಮದಲ್ಲೇ ಹೊಂಬಾಳೆ ಸಂಸ್ಥೆ ಈ ವಿಚಾರವನ್ನು ಹಂಚಿಕೊಂಡಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಕಾಮೆಡಿ ಎಂಟರ್‌ಟೈನರ್ ಚಿತ್ರದಲ್ಲಿ ಜಗ್ಗೇಶ್ ಅಡುಗೆ ಭಟ್ಟನ ಪಾತ್ರದಲ್ಲಿ ನಟಿಸಿದ್ದಾರೆ.

ಹೊಂಬಾಳೆ ಸಂಸ್ಥೆ “ನಮ್ಮ ರಾಘವೇಂದ್ರ ಸ್ಟೋರ್ಸ್‌ನ ಖ್ಯಾತ ಬಾಣಸಿಗರಾದ ಜಗ್ಗೇಶ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನವಿರಾಗಿ ಸಿದ್ಧಪಡಿಸಿರುವ ನವರಸದೌತಣವನ್ನು ಏಪ್ರಿಲ್ 28, 2023ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಉಣಬಡಿಸಲಿದ್ದೇವೆ. ವಯಸ್ಸು ಕೈ ಜಾರಿದೆ, ಕೈ ಹಿಡಿಯಲು ಒಂದು ವಧು ಬೇಕಿದೆ” ಎಂದು ಟ್ವೀಟ್ ಮಾಡಿದೆ.

ಹೋಟೆಲ್‌ನಲ್ಲಿ ಬಾಣಸಿಗನ ಕೆಲಸ ಮಾಡಿಕೊಂಡಿರುವ ನಾಯಕನಿಗೆ ವಯಸ್ಸು 40 ದಾಟಿದರೂ ಮದುವೆ ಆಗಿರಲ್ಲ. ಆತ ಮದುವೆ ಹುಡುಗಿ ಹುಡುಕಲು, ಮದುವೆ ಆಗಲು ಏನೆಲ್ಲಾ ಕಸರತ್ತು ಮಾಡುತ್ತಾನೆ ಎನ್ನುವುದನ್ನು ತಮಾಷೆಯಾಗಿ ಸಂತೋಷ್ ಆನಂದ್‌ರಾಮ್ ಈ ಚಿತ್ರದಲ್ಲಿ ಕಟ್ಟಿಕೊಟ್ಟಿದ್ದಾರೆ.

ಶ್ವೇತಾ ಶ್ರೀವಾಸ್ತವ್ ಚಿತ್ರದಲ್ಲಿ ಜೋಡಿಯಾಗಿ ಮಿಂಚಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ, ಶ್ರೀಶ ಕುದುವಳ್ಳಿ ಛಾಯಾಗ್ರಹಣ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಇದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!