Raghavendra stores: ‘ರಾಘವೇಂದ್ರ ಸ್ಟೋರ್ಸ್’ ಟ್ರೇಲರ್ ಬಿಡುಗಡೆ

ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಇತ್ತೀಚಿಗೆ ಬಿಡುಗಡೆಯಾಗಿದ್ದ ಈ ಸಿನಿಮಾದ ಟೀಸರ್ ಮತ್ತು ಲಿರಿಕಲ್ ವೀಡಿಯೊ ಪ್ರೇಕ್ಷಕರ ಗಮನ ಸೆಳೆದಿತ್ತು. ಟ್ರೈಲರ್ ಸಿನಿಮಾಸಕ್ತರಲ್ಲಿ ಚಿತ್ರದ ಬಗ್ಗೆ ಕುತೂಹಲ ಮೂಡಿಸಿದೆ.
ಕೆಜಿಎಫ್ ಮತ್ತು ಕಾಂತಾರ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್‌ ನ ವಿಜಯ್ ಕಿರಗಂದೂರು ಚಿತ್ರದ ನಿರ್ಮಾಪಕರಾಗಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರೊಂದಿಗೆ ಮೊದಲ ಬಾರಿಗೆ ಜಗ್ಗೇಶ್ ಚಿತ್ರದಲ್ಲಿ ನಟಿಸಿದ್ದಾರೆ.

ಸಂತೋಷ್ ಆನಂದ್ ರಾಮ್ ಅವರು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಮತ್ತು ರಾಜಕುಮಾರ ಕಮರ್ಷಿಯಲ್ ಚಿತ್ರ ನಿರ್ದೇಶನದ ನಂತರ ಹಾಸ್ಯ ಪ್ರಧಾನ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಈ ಚಿತ್ರವು ಇನ್ನೂ ಮದುವೆಯಾಗದೆ ವಧುವನ್ನು ಹುಡುಕುತ್ತಿರುವ 40 ವರ್ಷದ ವ್ಯಕ್ತಿಯ ಕಥೆ ಹೊಂದಿದೆ. ಈ ಚಿತ್ರ ಸಾಮಾಜಿಕ ಸಂದೇಶದೊಂದಿಗೆ ಹಾಸ್ಯ ಹೊಂದಿದೆ. ಸಂತೋಷ್ ಆನಂದ್ರಾಮ್ ನಿರ್ದೇಶನದ ಜೊತೆಗೆ  ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ, ಶ್ರೀಶಕುಡುವಳ್ಳಿ ಅವರ ಛಾಯಾಗ್ರಹಣವಿದೆ. ಜಗ್ಗೇಶ್ ಜೊತೆಗೆ ಶ್ವೇತಾ ಶ್ರೀವಾತ್ಸವ್, ರವಿಶಂಕರ್ ಗೌಡ ಮತ್ತು ದತ್ತಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!