ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ನಿನ್ನೆ ರಾತ್ರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದರು.
ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಪುನೀತ್ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದರು.
ರಾಹುಲ್ ಗಾಂಧಿ ಅವರು ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಅಶ್ವಿನಿ ಪುನೀತ್ ರಾಜ್ ಕುಮಾರ್, ಮಗಳು ವಂದಿತಾ ಜೊತೆ ಮಾತುಕತೆ ನಡೆಸಿದರು. ಈ ವೇಳೆ ರಾಘವೇಂದ್ರ ರಾಜ್ ಕುಮಾರ್ ಕೂಡಾ ಉಪಸ್ಥಿತರಿದ್ದರು.
ಪುನೀತ್ ರಾಜ್ಕುಮಾರ್ ಅವರು ಬಾಲನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟು ಬಳಿಕ ‘ಅಪ್ಪು’ ಸಿನಿಮಾ ಮೂಲಕ ಹೀರೋ ಆದರು. ಗಾಯಕನಾಗಿ, ನಿರ್ಮಾಪಕನಾಗಿ ಚಿತ್ರರಂಗಕ್ಕೆ ಕೊಡುಗೆ ನೀಡಿದರು. ‘ಪಿಆರ್ಕೆ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡಿದರು.
ಕಳೆದ ವರ್ಷ ಅಕಾಲಿಕವಾಗಿ ಅಗಲಿದ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಬಿಡುಗಡೆ ಆಗಿದ್ದು ಸೂಪರ್ ಹಿಟ್ ಎನಿಸಿದೆ. ಜೇಮ್ಸ್’ ಮಾ.17ರಂದು ಅವರ ಜನ್ಮದಿನದಂದು ತೆರೆ ಕಂಡಿದೆ. ಈ ಸಿನಿಮಾ ಕೇವಲ ನಾಲ್ಕು ದಿನಕ್ಕೆ 100 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿ ಆಗಿದೆ.
____

Be the first to comment