ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ “ಟೋಬಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. “ಟೋಬಿ” ಚಿತ್ರಕ್ಕೆ “ಮಾರಿ ಮಾರಿ ..ಮಾರಿಗೆ ದಾರಿ” ಎಂಬ ಅಡಿಬರಹವಿದೆ.
ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.
ಮಾರಿ.. ಮಾರಿ.. ಮಾರಿಗೆ ದಾರಿ!
‘ಟೋಬಿ’ ಆಗಸ್ಟ್ 25ರಂದು ನಿಮ್ಮ ಮುಂದೆ 😊
Make way for Maari 💥The beast that got the best out of us! Presenting to you, #TOBY
𝐈𝐍 𝐂𝐈𝐍𝐄𝐌𝐀𝐒 𝟐𝟓 𝐀𝐔𝐆𝐔𝐒𝐓, 𝟐𝟎𝟐𝟑 #TobyOnAug25 @rajbshettyOMK #BasilALChalakkal @Chaithra_Achar_ @samyuktahornad pic.twitter.com/YGSOBNW80t
— Raj B Shetty (@RajbShettyOMK) June 13, 2023
ರಾಜ್ ಬಿ ಶೆಟ್ಟಿ ಈವರೆಗಿನ ಚಿತ್ರಗಳ ಪೈಕಿ “ಟೋಬಿ” ಬಿಗ್ ಬಜೆಟ್ ನ ಚಿತ್ರವಾಗಿದೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಮೂಲಕಥೆ ಟಿ.ಕೆ ದಯಾನಂದ್ ಅವರದು. ರಾಜ್ ಬಿ ಶೆಟ್ಟಿ ರಚೆನೆ ಹಾಗೂ ಬಾಸಿಲ್ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ, ಪ್ರವೀಣ್ ಶ್ರೀಯನ್ ಛಾಯಾಗ್ರಹಣ – ಸಂಕಲನ ಹಾಗೂ ಅರ್ಜುನ್ ರಾಜ್ – ರಾಜಶೇಖರ್ ಅವರ ಸಾಹಸ ನಿರ್ದೇಶನ “ಟೋಬಿ” ಚಿತ್ರಕಿದ್ದು, ರಾಜ್ ಬಿ ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಆಚಾರ್, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್ ರಾಜ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ.


Be the first to comment