‘ರೂಪಾಂತರ’ ಸಿನಿಮಾ ಫಸ್ಟ್ ಲುಕ್ ಔಟ್​!

ನಟ ರಾಜ್​ ಬಿ ಶೆಟ್ಟಿ ಅವರ ಹೊಸ ಸಿನಿಮಾ ‘ರೂಪಾಂತರ’ದ  ಫಸ್ಟ್‌ ಲುಕ್‌  ರಿಲೀಸ್​ ಆಗಿದೆ.

ರಾಜ್​ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ‘ರೂಪಾಂತರ’ ಚಿತ್ರದ ಫಸ್ಟ್‌ ಲುಕ್ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಹೊಸ ಅಪ್ಡೇಟ್ ನೀಡಿದ್ದಾರೆ.

”ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ” ಎಂದು ರಾಜ್​ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.

‘ಒಂದು ಮೊಟ್ಟೆಯ ಕಥೆ’ ಚಿತ್ರತಂಡದ ಜೊತೆ ಮತ್ತೆ ರಾಜ್​ ಬಿ ಶೆಟ್ಟಿ ಕೈ ಜೋಡಿಸಿದ್ದಾರೆ. ರಾಜ್ ಬಿ ಶೆಟ್ಟಿ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ಅವರು ಸಂಭಾಷಣೆಯನ್ನು ಬರೆದಿದ್ದಾರೆ.

‘ಒಂದು ಮೊಟ್ಟೆಯ ಕಥೆ’ಯ ನಿರ್ಮಾಪಕ ಸುಹಾನ್ ಪ್ರಸಾದ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ, ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ. ಮಿಧುನ್ ಮುಕುಂದನ್ ಸಂಗೀತ ನೀಡಲಿದ್ದಾರೆ.

ಮಲಯಾಳಂನ ‘ಟರ್ಬೋ’ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುದ್ದ ಫಿಲಂಸ್‌ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ.

ಲಯಾಳಂನ ಟರ್ಬೋ ಸಿನಿಮಾದಲ್ಲಿ ಖಳನಾಯಕನಾಗಿ ಮಿಂಚಿದ್ದ ರಾಜ್​ ಬಿ ಶೆಟ್ಟಿ, ಈ ಬಾರಿ ‘ರೂಪಾಂತರ’ದ ಮೂಲಕ ಎಂಟ್ರಿ ಕೊಡಲಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!