ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ, 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿತ್ರನಟಿ ಲಕ್ಷ್ಮೀ ಅವರಿಗೆ ಜೀವಮಾನ ಸಾಧನೆಗೆ ಡಾ. ರಾಜಕುಮಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ನಿರ್ದೇಶಕ ಎಸ್ ನಾರಾಯಣ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಷ್ಣುವರ್ಧನ ಪ್ರಶಸ್ತಿ ದಿ. ಜಿ ಎಂ ಲಕ್ಷ್ಮೀಪತಿ ಅವರಿಗೆ ನೀಡಲಾಯಿತು. ಪ್ರಶಸ್ತಿಯನ್ನು ಲಕ್ಷ್ಮೀಪತಿ ಅವರ ಪರವಾಗಿ ಅವರ ಪುತ್ರ ರಾಮ್ ಪ್ರಸಾದ ಸ್ವೀಕರಿಸಿದರು.
ಇದೇ ವೇಳೆ ವಿವಿಧ ವಿಭಾಗಗಳಲ್ಲಿ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶುದ್ಧಿ, ಮಾರ್ಚ್ 22, ಪಡ್ಡಾಯಿ (ತುಳು) ಚಿತ್ರಗಳು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಅತ್ಯುತ್ತಮ ಚಿತ್ರಗಳಾಗಿ ಪ್ರಶಸ್ತಿ ಪಡೆದವು.
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರವಾಗಿ ಹೆಬ್ಬಟ್ ರಾಮಕ್ಕ, ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವಾಗಿ ರಾಜಕುಮಾರ, ಅತ್ಯುತ್ತಮ ಮಕ್ಕಳ ಚಿತ್ರವಾಗಿ ಎಳೆಯರು ನಾವು ಗೆಳೆಯರು, ಅತ್ಯುತ್ತಮ ನಟಿಯಾಗಿ ತಾರಾ ಅನುರಾಧ, ಅತ್ಯುತ್ತಮ ಪೋಷಕ ನಟಿ ಆಗಿ ರೇಖಾ, ಅತ್ಯುತ್ತಮ ಸಂಗೀತ ನಿರ್ದೇಶನ ಪ್ರಶಸ್ತಿಗೆ ವಿ.ಹರಿಕೃಷ್ಣ ಭಾಜನರಾದರು.
ಈ ಸಂದರ್ಭದಲ್ಲಿ ರಾಘವೇಂದ್ರ ರಾಜಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಮ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಆಯುಕ್ತ ಡಾ. ಪಿ ಎಸ್ ಹರ್ಷ, ಚಿನ್ನೇಗೌಡ ಮತ್ತು ಇತರರು ಉಪಸ್ಥಿತರಿದ್ದರು.
__
Be the first to comment