ರಾಜ್ ಕುಂದ್ರಾಗೆ ಮತ್ತೆ ನೋಟಿಸ್

ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಮತ್ತೆ ಸಂಕಷ್ಟ ಶುರು ಆಗಿದೆ. ‘ಪೋರ್ನ್ ರಾಕೆಟ್ ಕೇಸ್’ನಲ್ಲಿ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ರಾಜ್ ಕುಂದ್ರಾ ಅವರನ್ನು ಹಣಕಾಸು ವರ್ಗಾವಣೆ ಸಂಬಂಧ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಕೆಲವು ವರದಿಗಳ ಪ್ರಕಾರ ಕಳೆದ ವಾರ ಕುಂದ್ರಾ ವಿರುದ್ಧ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು. ಹಣ ವರ್ಗಾವಣೆಗೆ ಸಂಬಂಧಿಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ ಕುಂದ್ರಾ ಅವರ ವಿರುದ್ಧ ಮುಂಬೈ ಪೊಲೀಸ್ ಅಧಿಕಾರಿಗಳು ದಾಖಲಿಸಿದ್ದ ಎಫ್‍ಐಆರ್ ಪ್ರತಿಯನ್ನ ಸಂಗ್ರಹಿಸಿದ್ದಾರೆ. ಈ ಕುರಿತು ಇನ್ನೂ ಹೆಚ್ಚು ಮಾಹಿತಿ ತಿಳಿದುಕೊಳ್ಳಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಆರೋಪದ ಬಳಿಕ ಶಿಲ್ಪಾ ಮತ್ತು ರಾಜ್ ಕುಂದ್ರಾ ಒಟ್ಟಿಗೆ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಶಿಲ್ಪಾ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದು, ಮಕ್ಕಳ ಲಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ ಪ್ರತಿಯೊಂದು ಅಪ್ಡೇಟ್‍ಗಳನ್ನು ಶಿಲ್ಪಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಜೈಲಿನಿಂದ ಬಂದ ಮೇಲೆ ರಾಜ್ ಕುಂದ್ರಾ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ.

ರಾಜ್ ಕುಂದ್ರಾ ಅವರನ್ನು ಈ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣದ ಹಿನ್ನೆಲೆ ಪೊಲೀಸರು ಅರೆಸ್ಟ್ ಮಾಡಿದ್ದರು. ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಕುಂದ್ರಾ ಬಳಿಕ ಕಳೆದ ಡಿಸೆಂಬರ್‌ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!