ಅಣ್ಣನಿಗೆ ಡಬ್ಬಿಂಗ್ ಮಾಡಲಿರುವ ತಮ್ಮ

ಚಿರಂಜೀವಿ ಸರ್ಜಾ ನಟನೆಯ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಡಬ್ಬಿಂಗ್ ಮಾಡಲಿದ್ದಾರೆ.

ಚಿರಂಜೀವಿ ಸರ್ಜಾ ಅವರು ಅಕಾಲಿಕವಾಗಿ ನಿಧನ ಹೊಂದಿದ ಬಳಿಕ ತಮ್ಮ ಧ್ರುವ ಸರ್ಜಾ ‘ರಾಜಮಾರ್ತಾಂಡ’ ಚಿತ್ರದ ನಿರ್ಮಾಪಕರಿಗೆ ಈ ಸಿನಿಮಾಗೆ ತಾವೇ ಡಬ್ಬಿಂಗ್ ಮಾಡುವುದಾಗಿ ಹೇಳಿದ್ದರು. ಅಂತೆಯೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಚಿತ್ರಕ್ಕೆ ಡಬ್ಬಿಂಗ್ ಮಾಡಲಿದ್ದಾರೆ.

ಶೀಘ್ರದಲ್ಲೇ ಈ ಚಿತ್ರವನ್ನು ಸೆನ್ಸಾರ್​ ಮಂಡಳಿ ವೀಕ್ಷಣೆ ಮಾಡಲಿದೆ. ಕಳೆದ ಒಂದೂವರೆ ವರ್ಷದಿಂದ ‘ರಾಜಮಾರ್ತಾಂಡ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್‌ ಕೆಲಸ ನಡೆಯುತ್ತಿದೆ. ಚಿರು ನಿಧನ ಆಗುವ ಮೊದಲು ಚಿತ್ರದ ಶೂಟಿಂಗ್ ಪೂರ್ಣ ಆಗಿತ್ತು. ಈಗ ಸಿನಿಮಾದ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ಅಭಿಮಾನಿಗಳಿಗೆ ಸಿನಿಮಾ ತೋರಿಸಲು ಚಿತ್ರತಂಡ ಯೋಜನೆ ರೂಪಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಹ ಚಿತ್ರದಲ್ಲಿ ಧ್ವನಿ ನೀಡುತ್ತಿದ್ದಾರೆ.

ಗೀತ ರಚನೆಕಾರರಾಗಿ ಹೆಸರು ಮಾಡಿರುವ ಜೆ.ಕೆ.ರಾಮ ನಾರಾಯಣ್ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ಚಿತ್ರ ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಶ್ರೀ ಮಾದೇಶ್ವರ ಪ್ರೊಡಕ್ಷನ್ಸ್ ಮೂಲಕ ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಜೆ.ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ ನಟಿಸಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಮುಂತಾದವರು ಚಿತ್ರದ ತಾರಾಗಣದಲ್ಲಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!