ಚಿರಂಜೀವಿ ಸರ್ಜಾ ನಟನೆಯ ಕೊನೆಯ ಚಿತ್ರ ರಾಜಮಾರ್ತಾಂಡ ಜೂನ್‌ನಲ್ಲಿ ಬಿಡುಗಡೆಯಾಗಲಿದೆ.
ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಧ್ರುವ ಸರ್ಜಾ ಧ್ವನಿ ನೀಡಲಿರುವುದು ವಿಶೇಷವಾಗಿದೆ.
“ಟ್ರೈಲರ್‌ಗೆ ಧ್ರುವ ಧ್ವನಿ ನೀಡಿದ್ದಾರೆ. ಅವರು ಸದ್ಯದಲ್ಲೇ ಡಬ್ಬಿಂಗ್ ಪೂರ್ಣಗೊಳಿಸಲಿದ್ದಾರೆ. ದರ್ಶನ್ ವಾಯ್ಸ್ ಓವರ್ ಕೊಡುವುದಾಗಿ ಹೇಳಿದ್ದಾರೆ. ರಾಯನ್ ರಾಜ್ ಸರ್ಜಾ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್‌ನಲ್ಲಿ ಚಿತ್ರ ತೆರೆಗೆ ಬರಲಿದೆ. ಕೊರೊನಾ ನಾಲ್ಕನೇ ಅಲೆಯ ಪರಿಸ್ಥಿತಿ ನೋಡಿಕೊಂಡು ದಿನಾಂಕ ಘೋಷಣೆ ಮಾಡುತ್ತೇವೆ” ಎಂದು ನಿರ್ದೇಶಕ ರಾಮ್ ನಾರಾಯಣ್ ಹೇಳಿದ್ದಾರೆ.
“ರಾಜಮಾರ್ತಾಂಡ ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲಿದ್ದೇವೆ. ಚಿರು ಅವರ 101 ಅಡಿ ಎತ್ತರದ ಕಟೌಟ್, ರಾಯನ್ ರಾಜ್ ಸರ್ಜಾ ಅವರ 51 ಅಡಿ ಎತ್ತರದ ಕಟೌಟ್ ನಿಲ್ಲಿಸಲಿದ್ದೇವೆ” ಎಂದು ನಿರ್ಮಾಪಕ ಶಿವಕುಮಾರ್ ಹೇಳಿದ್ದಾರೆ.
ಚಿರಂಜೀವಿ ಸರ್ಜಾಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ ನಟಿಸಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ, ಭೂಷಣ್, ಹರ್ಷ ನೃತ್ಯ ನಿರ್ದೇಶನ ಮಾಡಿದ್ದಾರೆ.
ಚಿರಂಜೀವಿ ಸರ್ಜಾ ಅವರ ಕೊನೆಯ ಚಿತ್ರವಾಗಿರುವ ಕಾರಣ ಈ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.
____
Be the first to comment