ಪುನೀತ್ ರಾಜ್ ಕುಮಾರ್ ಅವರಿಗೆ ನ. 1ರಂದು ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂನಿಯರ್ ಎನ್ಟಿಆರ್ ಬರುವುದು ಖಚಿತವಾಗಿದೆ.
ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ನ.1ರ ಸಂಜೆ 4 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸುತ್ತಿರುವುದಾಗಿ ನಟ ರಜನಿಕಾಂತ್ ತಿಳಿಸಿದ್ದಾರೆ.
ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿರುವುದಾಗಿ ಆಯೋಜಕರು ತಿಳಿಸಿದ್ದಾರೆ.
ಪುನೀತ್ ಗೆ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿಯ ಜೊತೆಗೆ ಬೆಳ್ಳಿಯ ಸ್ಮರಣಿಕೆ, 50 ಗ್ರಾಂ ಚಿನ್ನದ ಪದಕ ಇರಲಿದೆ.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ವಿ. ಸುನಿಲ್ ಕುಮಾರ್ ಸೇರಿದಂತೆ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ.
ಗಾಯಕ ವಿಜಯಪ್ರಕಾಶ್ ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
__

Be the first to comment