ಜನಪ್ರಿಯ ಧಾರಾವಾಹಿ ‘ಅಮೃತವರ್ಷಿಣಿ’ ಖ್ಯಾತಿಯ ನಟಿ ರಜಿನಿ, ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಅವರೊಂದಿಗೆ ಶನಿವಾರ ವಿವಾಹವಾಗಿದ್ದಾರೆ.
ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ಸರಳವಾಗಿ ನೆರವೇರಿತು. ಮದುವೆಯ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.
ರಜಿನಿ ಅವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ಕೆಲಸ ಮಾಡಿದ್ದಾರೆ. ಅವರು ‘ಅಮೃತವರ್ಷಿಣಿ’ ಧಾರಾವಾಹಿಯ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ನಂತರ ‘ಹಿಟ್ಲರ್ ಕಲ್ಯಾಣ’ ಸೇರಿದಂತೆ ಹಲವಾರು ಧಾರಾವಾಹಿಗಳು ಮತ್ತು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಇನ್‌ಸ್ಟಾಗ್ರಾಮ್ ರೀಲ್ಸ್‌ಗಳ ಮೂಲಕ ಅಭಿಮಾನಿಗಳ ಸಂಪರ್ಕದಲ್ಲಿದ್ದರು.
ರಜಿನಿ ಮತ್ತು ಅರುಣ್ ವೆಂಕಟೇಶ್ ಹಲವಾರು ರೀಲ್ಸ್‌ಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಕುರಿತು ಹಿಂದೆ ಮಾಧ್ಯಮಗಳು ಪ್ರಶ್ನಿಸಿದಾಗ, ರಜಿನಿ “ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್ ಮಾತ್ರ” ಎಂದು ಸ್ಪಷ್ಟನೆ ನೀಡಿದ್ದರು. ಈಗ ಅವರಿಬ್ಬರ ಮದುವೆ ಸುದ್ದಿಯು ಅಭಿಮಾನಿಗಳಲ್ಲಿ ಚರ್ಚೆ ಹುಟ್ಟಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ನಟರು ರಜಿನಿ ಹಾಗೂ ಅರುಣ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.
—–





Be the first to comment