ಬಹುನಿರೀಕ್ಷಿತ ‘ಕೂಲಿ’ ಚಿತ್ರದ ಬಿಡುಗಡೆಗೆ ಮುನ್ನ ದಿನವಾದ ಆಗಸ್ಟ್ 13ರಂದು ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿನ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ್ದಾರೆ.
ಬಸವನ ಗುಡಿಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಆಗಸ್ಟ್ 13ರಂದು ಬೆಳಗ್ಗೆ 10 ಗಂಟೆಗೆ ಭೇಟಿ ನೀಡಿದ ರಜನಿಕಾಂತ್ ಅವರು ಧ್ಯಾನ ಮಾಡಿದರು. ಈ ಸಂದರ್ಭದಲ್ಲಿ ರಾಮಕೃಷ್ಣ ಆಶ್ರಮದ ಸಿಬ್ಬಂದಿಗಳು ಉಪಸ್ಥಿತರಿದ್ದರು.
375 ಕೋಟಿ ರೂಪಾಯಿಗೂ ಹೆಚ್ಚು ಬಜೆಟ್ ನಲ್ಲಿ ನಿರ್ಮಾಣ ಆಗಿರುವ ಕೂಲಿ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಜನಿಕಾಂತ್ ಜೊತೆಗೆ ತೆಲುಗು ನಟ ನಾಗಾರ್ಜುನ, ಕನ್ನಡದ ಹೀರೋ ಉಪೇಂದ್ರ, ಬಹುಭಾಷಾ ನಟಿ ಶೃತಿ ಹಾಸನ್ ಇತರರು ನಟಿಸಿದ್ದಾರೆ. ವಿಶೇಷ ಹಾಡಿನಲ್ಲಿ ಪೂಜಾ ಹೆಗ್ಡೆ ಮಿಂಚಿದ್ದಾರೆ.
ಸನ್ ಪಿಕ್ಚರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಿನಿಮಾ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಈ ಚಿತ್ರವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನ ಮಾಡಿದ್ದಾರೆ. ರಜನಿಕಾಂತ್ ಅವರು ಈ ಚಿತ್ರಕ್ಕೆ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗಿದೆ.





Be the first to comment