ರಾಜು ಶ್ರೀವಾಸ್ತವ ಇನ್ನಿಲ್ಲ

ಬಾಲಿವುಡ್‌ ನ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.

ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಜು ಶ್ರೀವಾಸ್ತವ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಆಗಸ್ಟ್ 10ರಂದು ಹೃದಯಾಘಾತದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಿದುಳು ನಿಷ್ಕ್ರಿಯಗೊಂಡು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ರಾಜು ನಿಧನಕ್ಕೆ ಸಿನಿಮಾ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜು ಶ್ರೀವಾಸ್ತವ ತಮ್ಮ ಪ್ರತಿಭೆ ಮೂಲಕ ದೊಡ್ಡ ಸಿನಿಮಾಗಳಲ್ಲೂ ಅವಕಾಶ ಗಿಟ್ಟಿಸಿದ್ದರು. ಮೇನೆ ಪ್ಯಾರ್ ಕಿಯಾ, ಬಾಜಿಗರ್ ಚಿತ್ರದಲ್ಲಿ ನಟಿಸಿ ಗಮನ ಸೆಳೆದಿದ್ದರು.

1980 ರಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿ ಶೋ ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಮೊದಲ ಆವೃತ್ತಿ ಮೂಲಕ ಅವರು ಗುರುತಿಸಿಕೊಂಡಿದ್ದರು. ಬಳಿಕ ಚಿತ್ರರಂಗ ಸೇರಿದಂತೆ ಮನರಂಜನಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದುಕೊಂಡಿದ್ದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!