ಜನಪ್ರಿಯ ಹಾಸ್ಯ ನಟ, ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಹೃದಯಘಾತರಿಂದ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಮೇ 12ರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವರೂಪ್ ಎಂದೇ ರಾಕೇಶ್ ಪೂಜಾರಿ ಜನಪ್ರಿಯತೆ ಪಡೆದಿದ್ದರು. ಹಲವು ವರ್ಷಗಳಿಂದಲೂ ಅವರು ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ರಾಕೇಶ್ ಪೂಜಾರಿ ‘ಹಿಟ್ಲರ್ ಕಲ್ಯಾಣ’ ಸೇರಿದಂತೆ ಸಿನಿಮಾ, ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪೈಲ್ವಾನ್, ಇದು ಎಂಥಾ ಲೋಕವಯ್ಯ ಎನ್ನುವ ನಾಟಕಗಳಲ್ಲಿ ನಟಿಸಿದ್ದರು. ತುಳುವಿನಲ್ಲೂ ಪೆಟ್ಕಮ್ಮಿ ಹಾಗೂ ಪಮ್ಮನ್ನೆ ದಿ ಗ್ರೇಟ್ ಸೇರಿದಂತೆ ಪ್ರಮುಖ ನಾಟಕಗಳನ್ನು ಮಾಡಿದ್ದಾರೆ.
‘ಕಾಮಿಡಿ ಕಿಲಾಡಿಗಳು’ ವೇದಿಕೆ ಅವರ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್ನಲ್ಲಿ ಅವರು ವಿನ್ನರ್ ಆಗಿದ್ದರು.
ರಾಕೇಶ್ ಪೂಜಾರಿ ಸಾವಿಗೆ ರಕ್ಷಿತಾ ಪ್ರೇಮ್ ಕಂಬನಿ ಮಿಡಿದಿದ್ದಾರೆ. ರಾಕೇಶ್ ಬಳಿ ಇನ್ಯಾವಗಲೂ ಮಾತನಾಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಳ್ಳಲಾಗುತ್ತಿಲ್ಲ. ಕಾಮಿಡಿ ಕಿಲಾಡಿಗಳು ನನ್ನ ಹೃದಯಕ್ಕೆ ಹತ್ತಿರವಾದ ಶೋ. ಈ ಶೋನ ಸ್ಪರ್ಧಿ ರಾಕೇಶ್ ಒಳ್ಳೆಯ ವ್ಯಕ್ತಿ ಆಗಿ ಕಾಣಿಸಿದ್ದರು’ ಎಂದು ಪೋಸ್ಟ್ ಹಾಕಿದ್ದಾರೆ.
ಕಾಮಿಡಿ ಕಿಲಾಡಿಯಲ್ಲಿ ರಕ್ಷಿತಾ ಪ್ರೇಮ್ ಜಡ್ಜ್ ಆಗಿದ್ದರು. ಹೀಗಾಗಿ ರಾಕೇಶ್ ಜೊತೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು.
—-

Be the first to comment