ನಟಿ ರಾಖಿ ಸಾವಂತ್ ಪಾಕಿಸ್ತಾನವನ್ನು ಬೆಂಬಲಿಸಿ ‘ಜೈ ಪಾಕಿಸ್ತಾನ್’ ಎಂದು ಘೋಷಣೆ ಮಾಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ದೇಶದ್ರೋಹದ ಆರೋಪ ಎದುರಿಸುತ್ತಿದ್ದಾರೆ.
ವೈರಲ್ ಆಗುತ್ತಿರುವ ವಿಡಿಯೋದಲ್ಲಿ ರಾಖಿ ಸಾವಂತ್, ” ನಾನು ಸತ್ಯವನ್ನೇ ಮಾತನಾಡುತ್ತೇನೆ, ಸತ್ಯವನ್ನೇ ಬಿಟ್ಟು ಬೇರೇನನ್ನೂ ಹೇಳುವುದಿಲ್ಲ. ಪಾಕಿಸ್ತಾನಿಗಳೇ, ನಾನು ನಿಮ್ಮೊಂದಿಗಿದ್ದೇನೆ. ಜೈ ಪಾಕಿಸ್ತಾನ್!” ಎಂದು ಹೇಳಿದ್ದಾರೆ . ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದುಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಬೇಕು. ಅವರನ್ನು ದೇಶದಿಂದ ಗಡೀಪಾರು ಮಾಡಬೇಕೆಂದು ಹಲವರು ಒತ್ತಾಯಿಸಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ್ ಸೇನಾ, ರಾಖಿ ಸಾವಂತ್ ನ್ನು ದೇಶದಿಂದ ಒದ್ದೋಡಿಸುವ ಎಚ್ಚರಿಕೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕ ಪ್ರವಾಸಿಗರು ಸಾವನ್ನಪ್ಪಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ದೇಶದಲ್ಲಿರುವ ಪಾಕಿಸ್ತಾನಿ ನಾಗರಿಕರು ಹಿಂತಿರುಗುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಪರಿಸ್ಥಿತಿಯಲ್ಲಿ ರಾಖಿ ಸಾವಂತ್ ಪಾಕಿಸ್ತಾನದ ಪರವಾಗಿ ನಿಲ್ಲುವ ಮೂಲಕ ದೇಶ ವಿರೋಧಿ ನಿಲುವು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹಿಂದೆಯೂ ರಾಖಿ ಸಾವಂತ್ , ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್ ಅವರನ್ನು ಬೆಂಬಲಿಸಿದ್ದರು. “ಅವಳು ದೇಶದ ಸೊಸೆ, ಅವಳು ಭಾರತದಲ್ಲಿಯೇ ಇರಲಿ” ಎಂದು ಹೇಳುವ ಮೂಲಕ ಸೀಮಾ ಹೈದರ್ ಪರವಾಗಿ ನಿಂತಿದ್ದರು.
—

Be the first to comment