ಚರ್ಚೆಗೆ ಕಾರಣವಾದ ರಕ್ಷಿತ್ ಶೆಟ್ಟಿ ಪೋಸ್ಟ್

ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದೆ ಇರುವ ರಕ್ಷಿತ್ ಶೆಟ್ಟಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ‘777 ಚಾರ್ಲಿ’ ಚಿತ್ರದ ಫೋಟೋ ಹಂಚಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರ ಆಚೆ ಎಲ್ಲೋ ಪಾರ್ಟ್ ಬಿ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಅವರು ಹೊಸ ಸಿನಿಮಾಗಳ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಈಗ ಅವರು ‘777 ಚಾರ್ಲಿ’ ಸಿನಿಮಾದ ಭಾವನಾತ್ಮಕ ದೃಶ್ಯದ ಪೋಟೋವನ್ನು ಹಾಕಿರುವುದು ಹಲವು ಕುತೂಹಲಗಳನ್ನು ಹುಟ್ಟು ಹಾಕಿದೆ.

ರಶ್ಮಿಕಾ ಮಂದಣ್ಣ ಅವರ ಜೊತೆಗಿನ ನಿಶ್ಚಿತಾರ್ಥ ಮುರಿದ ನಂತರ ರಕ್ಷಿತ್ ಶೆಟ್ಟಿ ಅವರ ಬದುಕಿನ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಜೊತೆಗೆ ವಿವಾಹವಾದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಅವರು ಹಾಕಿರುವ ಫೋಟೋ ಚರ್ಚೆಗೆ ಕಾರಣವಾಗಿದೆ.

ಫೇಸ್ ಬುಕ್ ನಲ್ಲಿ ರಕ್ಷಿತ್ ಶೆಟ್ಟಿ ಅವರು ಕಳೆದ ವರ್ಷದ ಏಪ್ರಿಲ್ ನಲ್ಲಿ ಕೊನೆಯದಾಗಿ ಪೋಸ್ಟ್ ಮಾಡಿದ್ದರು. ನಂತರ ಈಗ ಅವರು ಫೋಟೋ ಹಂಚಿಕೊಂಡಿರುವುದು ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ತಮ್ಮ ಕೆಲಸದಲ್ಲಿ ತಲ್ಲೀನರಾಗಿರುವ ರಕ್ಷಿತ್ ಶೆಟ್ಟಿ ಅವರ ಹೊಸ ಪೋಸ್ಟ್ ಚರ್ಚೆಗೆ ಕಾರಣವಾಗಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!