‘ರಾಮಾಯಣ’ದಲ್ಲಿ ಶೂರ್ಪನಖಿ ಪಾತ್ರದಲ್ಲಿ ಅಭಿನಯಿಸಿರುವ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆದ ‘ರಾಮಾಯಣ: ಪ್ರಥಮ್ ಸಂಕಲ್ಪ’, ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಶೂರ್ಪನಖಿ ಪಾತ್ರದ ಬಗ್ಗೆ ಯಶ್ ಶ್ಲಾಘಿಸಿದ್ದಾರೆ. ರಕುಲ್ ಪ್ರೀತ್ ಸಿಂಗ್ ಅವರು ಆ ಐಕಾನಿಕ್ ಪಾತ್ರವನ್ನು ನಿರ್ವಹಿಸಿದ ರೀತಿ ಗಮನಾರ್ಹವಾಗಿದೆ ಎಂದಿದ್ದಾರೆ.
ರಾಮಾಯಣದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಅಭಿನಯ ಚಿತ್ರ ಬಿಡುಗಡೆಯಾಗುವ ಮೊದಲೇ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಶೂರ್ಪನಖಿ ಪಾತ್ರವನ್ನು ಒಂದೇ ದೃಷ್ಟಿಕೋನದಲ್ಲಿ ತೋರಿಸಲಾಗುತ್ತದೆ. ಈ ಸಿನಿಮಾದಲ್ಲಿ ಆ ಪಾತ್ರವನ್ನು ಹೆಚ್ಚು ಭಾವನಾತ್ಮಕವಾಗಿ ಮತ್ತು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ರಕುಲ್ ಪ್ರೀತ್ ಸಿಂಗ್ ತಮ್ಮ ಅಭಿನಯದ ಮೂಲಕ ಶೂರ್ಪನಖಿ ಪಾತ್ರಕ್ಕೆ ಹೊಸ ಅರ್ಥ ಕೊಟ್ಟಿದ್ದಾರೆ.
ರಾಮಾಯಣ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮ, ಸಾಯಿ ಪಲ್ಲವಿ ಸೀತೆ, ಕನ್ನಡ ನಟ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಬಹುನಿರೀಕ್ಷಿತ ಈ ಸಿನಿಮಾ ಈಗಾಗಲೇ ಭಾರೀ ಹೈಪ್ ಸೃಷ್ಟಿಸಿದೆ. ಜುಲೈ 24ಕ್ಕೆ ವಿಶ್ವದಾದ್ಯಂತ ‘ರಾಮಾಯಣ’ ಟ್ರೇಲರ್ ಬಿಡುಗಡೆಯಾಗಲಿದೆ.





Be the first to comment