ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ʼಪೆದ್ದಿʼಗಾಗಿ ಭರ್ಜರಿ ಸಿದ್ಧತೆ ನಡೆಸಿದ್ದಾರೆ.
ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ತಮ್ಮ ಪಾತ್ರಕ್ಕಾಗಿ ರಾಮ್ ಚರಣ್ ಭರ್ಜರಿಯಾಗಿ ಸಿದ್ಧತೆ ನಡೆಸಿದ್ದಾರೆ. ಜಿಮ್ ನಲ್ಲಿ ದೇಹ ಹುರಿಗೊಳಿಸಿ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ರಾಮ್ ಚರಣ್ ತಮ್ಮ ಪಾತ್ರಕ್ಕಾಗಿ ಕಂಪ್ಲೀಟ್ ತಯಾರಾಗಿದ್ದು, ಪೆದ್ದಿ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಬುಚ್ಚಿಬಾಬು ಸನಾ ನಿರ್ದೇಶನ ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಕಥಾಹಂದರವೊಂದಿದೆ. ರಾಮ್ ಚರಣ್‌ಗೆ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ಕುಮಾರ್ ಕೂಡ ಅಭಿನಯಿಸುತ್ತಿದ್ದಾರೆ.
ಚಿತ್ರಕ್ಕೆ ವೆಂಕಟ ಸತೀಶ್ ಕಿಲಾರು ಹಣ ಹಾಕುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ನಿರ್ಮಾಣದಲ್ಲಿ ಸಾಥ್ ನೀಡಿದೆ. ಎ ಆರ್ ರೆಹಮಾನ್ ಸಂಗೀತ ನೀಡುತ್ತಿದ್ದು,ಆರ್. ರತ್ನವೇಲು ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.
ಸದ್ಯ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಮಾರ್ಚ್ 27, 2026 ರಂದು ಬಹುಭಾಷಾಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಅಂದು ರಾಮ್ ಚರಣ್ ಹುಟ್ಟುಹಬ್ಬ. ಆ ಕಾರಣದಿಂದ ಅಭಿಮಾನಿಗಳ ಪಾಲಿಗೆ ‘ಪೆದ್ದಿ’ ಸಿನಿಮಾದ ಬಿಡುಗಡೆ ಸಖತ್ ಸ್ಪೆಷಲ್ ಆಗಿರಲಿದೆ.
—-





Be the first to comment